ಬೆಂಗಳೂರು; ಬಿಕಾಂ ವಿದ್ಯಾರ್ಥಿ ಆತ್ಮಹತ್ಯೆ
ಸಾಂದರ್ಭಿಕ ಚಿತ್ರ
ಬೆಂಗಳೂರು, ಜೂ.27: ಬಿಕಾಂ ವಿದ್ಯಾರ್ಥಿಯೊಬ್ಬ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಪ್ರಶಾಂತ್ ಎಂಬಾತ ವಿದ್ಯಾರ್ಥಿ ವಿಷ ಸೇವನೆ ಮಾಡಿ ಆತ್ಮಹತ್ಯೆಗೆ ಒಳಗಾಗಿದ್ದಾನೆ ಎಂದು ತಿಳಿದುಬಂದಿದೆ.
ಜಯನಗರದ ವಿಜಯ ಕಾಲೇಜಿನಲ್ಲಿ ಪ್ರಶಾಂತ್ ಬಿಕಾಂ ವ್ಯಾಸಂಗ ಮಾಡುತ್ತಿದ್ದು, ಇತ್ತೀಚಿಗೆ ಕಾಲೇಜಿನಲ್ಲಿ ಯುವಕರ ಜೊತೆ ಗಲಾಟೆ ಮಾಡಿಕೊಂಡಿದ್ದ ಎಂದು ಕಾಲೇಜಿನ ವಿದ್ಯಾರ್ಥಿಗಳು ಮಾಹಿತಿ ನೀಡಿದ್ದಾರೆ. ರವಿವಾರ ರಾತ್ರಿ ಊಟ ಮುಗಿಸಿ ಕೊಠಡಿಯಲ್ಲಿ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ಅಸ್ವಸ್ಥಗೊಂಡ ಆತನನ್ನು ಹೆಚ್ಚಿನ ಚಿಕಿತ್ಸೆಗಾಗಿ ಸೆಂಟ್ಜಾನ್ಸ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಮಾರ್ಗದಲ್ಲಿ ಮೃತಪಟ್ಟಿರುವುದಾಗಿ ಹೇಳಲಾಗುತ್ತಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Next Story