ಮಗುವನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ತಾಯಿ; ಡೆತ್ ನೋಟ್ ಪತ್ತೆ
ಸಾಂದರ್ಭಿಕ ಚಿತ್ರ - PTI
ಬೆಂಗಳೂರು, ಜು.1: ಮಗುವನ್ನು ಕೊಂದು ತಾಯಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಜರಾಜೇಶ್ವರಿನಗರದ ಅಪಾರ್ಟ್ಮೆಂಟ್ವೊಂದರಲ್ಲಿ ನಡೆದಿದೆ.
ಮೃತರನ್ನು ದೀಪಾ(30) ಹಾಗೂ ಆಕೆಯ ಮಗು ರಿಯಾ ಎಂದು ಗುರುತಿಸಲಾಗಿದೆ.
ವೃತ್ತಿಯಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿರುವ ಪತಿ ಆದರ್ಶ್ 2017ರಲ್ಲಿ ದೀಪಾ ಅವರನ್ನು ಮದುವೆಯಾಗಿದ್ದರು. ಆರ್.ಆರ್.ನಗರದ ಅಪಾರ್ಟ್ಮೆಂಟ್ವೊಂದರಲ್ಲಿ ದಂಪತಿ ವಾಸವಿದ್ದರು.
ಕಳೆದ ಒಂದು ವಾರದಿಂದ ಜ್ವರ ಹಾಗೂ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ದೀಪಾ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಗುರುವಾರ ರಾತ್ರಿ ನಿದ್ರಿಸುತ್ತಿದ್ದ ಮಗುವಿನ ಕುತ್ತಿಗೆಗೆ ವೇಲ್ ಬಿಗಿದು ಹತ್ಯೆ ಮಾಡಿದ್ದಾರೆ. ಬಳಿಕ ತಾವೂ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವುದು ಪೊಲೀಸ್ ತನಿಖೆಯಿಂದ ಬೆಳಕಿಗೆ ಬಂದಿದೆ.
ಸಾಯುವ ಮುನ್ನ ಬರೆದ ಡೆತ್ ನೋಟ್ನಲ್ಲಿ ಈ ಘಟನೆಗೆ ಯಾರೂ ಕಾರಣರಲ್ಲ. ನಾನು ಈಗಷ್ಟೇ ಜೀವ ಬಿಡುತ್ತಿದ್ದೇನೆ, ನನ್ನನ್ನು ಕ್ಷಮಿಸಿ ಅಮ್ಮ ಐ ಲವ್ ಯು ದಿವ್ಯಾ ಎಂದು ಡೆತ್ನೋಟ್ನಲ್ಲಿ ದೀಪಾ ಬರೆದಿದ್ದಾರೆ. ಈ ಮೊಕದ್ದಮೆ ದಾಖಲಿಸಿಕೊಂಡಿರುವ ಆರ್.ಆರ್.ನಗರ ಠಾಣೆ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.