ಇಂದಿನಿಂದ ವಕ್ಫ್ ಬೋರ್ಡ್ ಅಧ್ಯಕ್ಷರ ವಿದೇಶ ಪ್ರವಾಸ
ಬೆಂಗಳೂರು, ಜು.1: ರಾಜ್ಯ ವಕ್ಫ್ ಬೋರ್ಡ್ ಅಧ್ಯಕ್ಷ ಮೌಲಾನ ಎನ್.ಕೆ.ಮುಹಮ್ಮದ್ ಶಾಫಿ ಸಅದಿ ಅವರು ಜು.2, 3 ಹಾಗೂ 4ರಂದು ದುಬೈ ಪ್ರವಾಸ ಕೈಗೊಳ್ಳಲಿದ್ದು, ಈ ವೇಳೆ ಅಬುಧಾಬಿ, ಶಾರ್ಜಾ ಸೇರಿದಂತೆ ವಿವಿಧ ಎಮಿರೆಟ್ಸ್ಗಳಲ್ಲಿನ ಅಭಿನಂದನಾ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.
ಎಲೈಟ್ ಅಲಯನ್ಸ್, ಎಚ್ಎಂಸಿ ಯುನೈಟೆಡ್ ಅಂತರರಾಷ್ಟ್ರೀಯ ಶಾಂತಿ ಪ್ರಶಸ್ತಿ-2022 ಪ್ರದಾನ ಸಮಾರಂಭದಲ್ಲಿಯೂ ಶಾಫಿ ಸಅದಿ ಭಾಗವಹಿಸಲಿದ್ದಾರೆ. ಅಲ್ಲದೆ, ರಾಜ್ಯದ ವಿವಿಧ ಸಂಘಟನೆಗಳೊಂದಿನ ಕಾರ್ಯಕ್ರಮಗಳಲ್ಲಿಯೂ ಪಾಲ್ಗೊಳ್ಳಲಿದ್ದಾರೆ.
Next Story