ಮಾಜಿ ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ
ರಾಷ್ಟ್ರಪತಿ ಚುನಾವಣೆಯ ಅಭ್ಯರ್ಥಿ ಯಶವಂತ ಸಿನ್ಹಾ ಭೇಟಿ
ಬೆಂಗಳೂರು; ವಿಧಾನಸಭೆ ವಿರೋಧ ಪಕ್ಷದ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಇಂದು ನಡೆಯಿತು.
ರಾಷ್ಟ್ರಪತಿ ಚುನಾವಣೆಯ ಅಭ್ಯರ್ಥಿ ಯಶವಂತ ಸಿನ್ಹಾ ಭೇಟಿ ನೀಡಿದ್ದು, ಅವರನ್ನು ಸ್ವಾಗತಿಸಲಾಯಿತು.
ಈ ಸಂದರ್ಭ ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್, ವಿಧಾನಸಭೆ ವಿರೋಧ ಪಕ್ಷದ ಉಪ ನಾಯಕ ಯು.ಟಿ. ಖಾದರ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ಈಶ್ವರ ಖಂಡ್ರೆ ಉಪಸ್ಥಿತರಿದ್ದರು.