ರಾಷ್ಟ್ರಪತಿ ಚುನಾವಣೆ: ಬೆಂಗಳೂರಿಗೆ ಆಗಮಿಸಿದ NDA ಅಭ್ಯರ್ಥಿ ದ್ರೌಪದಿ ಮುರ್ಮು
ಬೆಂಗಳೂರು: ರಾಷ್ಟ್ರಪತಿ ಚುನಾವಣಾ ಪ್ರಚಾರ ನಿಮಿತ್ತ ಬೆಂಗಳೂರಿಗೆ ಇಂದು ಸಂಜೆ ಆಗಮಿಸಿದ್ದಾರೆ.
ಖಾಸಗಿ ಹೋಟೆಲ್ನಲ್ಲಿ ಮುರ್ಮು ಅವರು ಬಿಜೆಪಿ ಶಾಸಕರು, ಸಂಸದರೊಂದಿಗೆ ಸಭೆ ನಡೆಸಲಿದ್ದಾರೆ. ಅವರು ತಮ್ಮ ಪರವಾಗಿ ಮತಯಾಚನೆ ಮಾಡಲಿದ್ದಾರೆ.
ಮುರ್ಮು ಅವರನ್ನು ಅಬಕಾರಿ ಸಚಿವ ಕೆ.ಗೋಪಾಲಯ್ಯ ಅವರು ಎಚ್ ಎ ಎಲ್ ವಿಮಾನ ನಿಲ್ದಾಣದಲ್ಲಿ ಆತ್ಮೀಯವಾಗಿ ಬರಮಾಡಿಕೊಂಡರು.ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಸಹಕಾರ ಖಾತೆ ಸಚಿವ ಎಸ್.ಟಿ.ಸೋಮಶೇಖರ್ ಸೇರಿದಂತೆ ಅನೇಕ ಸಚಿವರು ಉಪಸ್ಥಿತರಿದ್ದರು.
Next Story