ಬೆಂಗಳೂರು: ಹುಕ್ಕಾಬಾರ್ ಗಳ ಮೇಲೆ ಸಿಸಿಬಿ ದಾಳಿ
(ಸಾಂದರ್ಭಿಕ ಚಿತ್ರ)
ಬೆಂಗಳೂರು, ಜು.17: ಮಹಾಲಕ್ಷ್ಮೀ ಲೇಔಟ್ನಲ್ಲಿ ಅಕ್ರಮವಾಗಿ ನಡೆಸುತ್ತಿದ್ದ ಹುಕ್ಕಾಬಾರ್ ಮೇಲೆ ಸಿಸಿಬಿ ಪೆÇಲೀಸರು ದಾಳಿ ನಡೆಸಿ 60 ಸಾವಿರ ರೂ.ಮೌಲ್ಯದ ಮಾಲು ಜಪ್ತಿ ಮಾಡಿದ್ದಾರೆ.
ಅಕ್ರಮವಾಗಿ ಹುಕ್ಕಾ ಬಾರ್ ತೆರೆದು ನಿಯಮಗಳನ್ನು ಉಲ್ಲಂಘಿಸಿ ಯುವಕರನ್ನು ಮಾದಕಗಳನ್ನು ನೀಡಿ ಅಕ್ರಮ ಹಣ ಗಳಿಸುತ್ತಿದ್ದ ಮಾಹಿತಿಯನ್ನು ಆಧರಿಸಿ ದಾಳಿ ನಡೆಸಲಾಗಿದೆ.
ದಾಳಿಯ ವೇಳೆ ಹುಕ್ಕಾಗೆ ಬಳಸುತ್ತಿದ್ದ ಪರಿಕರಗಳು, ಹುಕ್ಕಾಫ್ಲೇವರ್ ಗಳು ಹಾಗೂ 11 ಸಾವಿರ ರೂ. ನಗದು ಜಪ್ತಿ ಮಾಡಿ ಇಲ್ಲಿನ ಮಹಾಲಕ್ಷ್ಮೀಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ದಂಧೆ: ರಾಮಮೂರ್ತಿನಗರದ ಟಿಸಿಪಾಳ್ಯದ ಯೂನಿಸೆಕ್ಸ್ ಸೆಲೂನ್ನಲ್ಲಿ ವೇಶ್ಯಾವಾಟಕೆ ದಂಧೆ ನಡೆಸುತ್ತಿರುವ ಮಾಹಿತಿ ಸಂಗ್ರಹಿಸಿದ ಸಿಸಿಬಿ ಪೊಲೀಸರು 6 ಮಂದಿ ಯುವತಿಯರನ್ನು ರಕ್ಷಿಸಿದ್ದಾರೆ.
Next Story