BBMP ಚುನಾವಣೆ; ಮತದಾರರ ಅಂತಿಮ ಪಟ್ಟಿ ಸೆ.22ಕ್ಕೆ ಪ್ರಕಟಿಸುವ ಸಾಧ್ಯತೆ: ಹೈಕೋರ್ಟ್ಗೆ ಮಾಹಿತಿ
ಬೆಂಗಳೂರು, ಸೆ.1: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (BBMP) ಚುನಾವಣೆ ಹಿನ್ನೆಲೆಯಲ್ಲಿ ಸೆ.22ಕ್ಕೆ ಮತದಾರರ ಅಂತಿಮ ಪಟ್ಟಿ ಪ್ರಕಟಿಸುವ ಸಾಧ್ಯತೆಯಿದೆ ಎಂದು ಹೈಕೋರ್ಟ್ಗೆ ರಾಜ್ಯ ಚುನಾವಣಾ ಆಯೋಗವು ಮಾಹಿತಿ ನೀಡಿದೆ.
ವಾರ್ಡ್ ಪುನರ್ ವಿಂಗಡಣೆ ಮತ್ತು ವಾರ್ಡ್ವಾರು ಮೀಸಲು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ಹೈಕೋರ್ಟ್ ನ್ಯಾಯಪೀಠದಲ್ಲಿ ನಡೆಯಿತು.
ವಿಚಾರಣೆ ಆರಂಭವಾಗುತ್ತಿದ್ದಂತೆಯೇ ಚುನಾವಣಾ ವೇಳಾಪಟ್ಟಿ ಪ್ರಕಟಿಸುವ ಕುರಿತಂತೆ ನ್ಯಾಯಪೀಠವು ಚುನಾವಣಾ ಆಯೋಗವನ್ನು ಪ್ರಶ್ನಿಸಿತು. ಇದಕ್ಕೆ ಪ್ರತಿಕ್ರಿಯಿಸಿದ ಆಯೋಗದ ಪರ ವಕೀಲರು, ಮೊದಲು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು. ನಂತರ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಲಾಗುವುದು ಎಮದು ಪೀಠಕ್ಕೆ ತಿಳಿಸಿದರು. ವಕೀಲರ ವಾದ ಆಲಿಸಿದ ನ್ಯಾಯಪೀಠವು ವಿಚಾರಣೆಯನ್ನು ಸೆ.8ಕ್ಕೆ ಮುಂದೂಡಿತು.
Next Story