ಸ್ಯಾಂಡಲ್ ವುಡ್ ನಟಿಯ ತಾಯಿ ವಿರುದ್ಧ FIR, ಬಂಧನಕ್ಕೆ ಶೋಧ
ಬೆಂಗಳೂರು, ಸೆ.15: ಪ್ರತಿಷ್ಠಿತ ಅಲೆಯನ್ಸ್ ವಿಶ್ವ ವಿದ್ಯಾಲಯ ಮಾರಾಟ ಮಾಡಲು ಮುಂದಾದ ಆರೋಪದಡಿ ಕನ್ನಡ ಸಿನೆಮಾ ನಟಿ ಶ್ರೀಲೀಲಾ ತಾಯಿ ಸ್ವರ್ಣಲತಾ ವಿರುದ್ಧ ಪ್ರಕರಣ ದಾಖಲಿಸಿರುವ ಪೊಲೀಸರು ಬಂಧನಕ್ಕೆ ಶೋಧ ಕಾರ್ಯ ಕೈಗೊಂಡಿದ್ದಾರೆ.
ರಾಜಕಾರಣಿಯೊಬ್ಬರಿಗೆ ಅಲೆಯನ್ಸ್ ವಿಶ್ವ ವಿದ್ಯಾಲಯ ಮಾರಾಟ ಮಾಡಲು ಸ್ವರ್ಣಲತಾ ಮುಂದಾಗಿದ್ದರು ಎನ್ನುವ ಕಾರಣಕ್ಕಾಗಿ ಅವರ ಮೇಲೆ ವಿವಿ ರಿಜಿಸ್ಟ್ರಾರ್ ನೀಡಿದ ದೂರಿನನ್ವಯ ಪ್ರಕರಣ ದಾಖಲಾಗಿದೆ.
ಮಧುಕರ್ ಅಂಗೂರ್ ಅವರಿಂದ ವಿವಿ ಮಾರಾಟಕ್ಕೆ ಸ್ವರ್ಣಲತಾ ಮುಂದಾಗಿದ್ದರು ಎಂದು ಹೇಳಲಾಗಿದ್ದು, ಮಧುಕರ್ ಮತ್ತು ಸ್ವರ್ಣಲತಾ ಗೂಂಡಾಗಳ ಜೊತೆ ವಿವಿಗೆ ನುಗ್ಗಿ ಸಿಬ್ಬಂದಿಗೆ ಮತ್ತು ವಿದ್ಯಾರ್ಥಿಗಳಿಗೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
Next Story