ಬೆಂಗಳೂರು: ಡೆತ್ ನೋಟ್ ಬರೆದಿಟ್ಟು ಎಫ್ಎಸ್ಎಲ್ ಅಧಿಕಾರಿ ಆತ್ಮಹತ್ಯೆ
ಬೆಂಗಳೂರು, ಅ.3: ಇಲ್ಲಿನ ಮಡಿವಾಳದಲ್ಲಿರುವ ವಿಧಿವಿಜ್ಞಾನ ಪ್ರಯೋಗಾಲಯ(ಎಫ್ಎಸ್ಎಲ್) ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಶೃತಿ ಎಂಬಾಕೆ ಆತ್ಮಹತ್ಯೆ ಮಾಡಿಕೊಂಡ ಎಫ್ಎಸ್ಎಲ್ ಅಧಿಕಾರಿ ಎಂದು ಗುರುತಿಸಲಾಗಿದೆ.
ಮಡಿವಾಳ ಠಾಣಾ ವ್ಯಾಪ್ತಿಯಲ್ಲಿರುವ ಅಪಾರ್ಟ್ಮೆಂಟ್ನಲ್ಲಿ ಶೃತಿ ಕಳೆದ ಎರಡು ದಿನಗಳ ಹಿಂದೆ ಆತ್ಮಹತ್ಯೆ ಶರಣಾಗಿದ್ದಾರೆ ಎನ್ನಲಾಗಿದೆ. ಇತ್ತೀಚೆಗೆ ಪತಿಯಿಂದ ವಿಚ್ಛೇದನ ಪಡೆದಿದ್ದರು ಇದರಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗುತ್ತಿದೆ.
ಆತ್ಮಹತ್ಯೆಗೆ ಸಂಬಂಧಿಸಿದಂತೆ ಶೃತಿ ಡೆತ್ ನೋಟ್ ಬರೆದಿಟ್ಟಿದ್ದಾರೆ. ಡೆತ್ ನೋಟ್ನಲ್ಲಿ ನನ್ನ ಸಾವಿಗೆ ನಾನೇ ಕಾರಣ ದಯವಿಟ್ಟು ನನಗೆ ಕ್ಷಮಿಸಿ ಎಂದು ವಿಚ್ಛೇದನ ಪಡೆದಿದ್ದ ಪತಿಗೆ ಹಾಗೂ ಪೋಷಕರಿಗೆ ತಿಳಿಸಿದ್ದಾರೆ. ಈ ಸಂಬಂಧ ಮಡಿವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story