Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕೃಷಿ ಡಿಜಿಟಲೀಕರಣದಲ್ಲಿ ಕರ್ನಾಟಕ...

ಕೃಷಿ ಡಿಜಿಟಲೀಕರಣದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವ ರಾಜ್ಯ: ಮುಖ್ಯಮಂತ್ರಿ ಬೊಮ್ಮಾಯಿ

ವಾರ್ತಾಭಾರತಿವಾರ್ತಾಭಾರತಿ6 Oct 2022 6:54 PM IST
share
ಕೃಷಿ ಡಿಜಿಟಲೀಕರಣದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವ ರಾಜ್ಯ: ಮುಖ್ಯಮಂತ್ರಿ ಬೊಮ್ಮಾಯಿ

ಬೆಂಗಳೂರು, ಅ.6: ಕರ್ನಾಟಕ ಕೃಷಿ ಕ್ಷೇತ್ರದ ಡಿಜಿಟಲೀಕರಣದಲ್ಲಿ ಮುಂಚೂಣಿಯಲ್ಲಿರುವ ರಾಜ್ಯ. ಈವರೆಗೆ ರೈತರು, ಸರ್ವೆ ನಂಬರ್ ಹಾಗೂ ಆಧಾರ್ ಗಳನ್ನು ಜೋಡಿಸಲಾಗಿದ್ದು, 78 ಲಕ್ಷ ರೈತರನ್ನು ಈ ವ್ಯಾಪಿಗೆ ತರಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. 

ಗುರುವಾರ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅಧ್ಯಕ್ಷತೆಯಲ್ಲಿ  ನೈಸರ್ಗಿಕ ಕೃಷಿ ಮತ್ತು ಡಿಜಿಟಲ್ ಕೃಷಿ ಕುರಿತು ನಡೆದ ವೀಡಿಯೊ ಸಂವಾದದಲ್ಲಿ ಗೃಹ ಕಚೇರಿ ಕೃಷ್ಣಾದಿಂದ ಪಾಲ್ಗೊಂಡು ಮಾತನಾಡಿದ ಅವರು, ‘ಕೇಂದ್ರ ಕೃಷಿ ಪ್ರಧಾನ ಕಾರ್ಯದರ್ಶಿಗಳು ಕೃಷಿ ಡಿಜಿಟಲೀಕರಣದಲ್ಲಿ ಕರ್ನಾಟಕ ಮುಂದಿರುವ ಬಗ್ಗೆ ಪ್ರಸ್ತಾಪಿಸಿದ್ದನ್ನು ಉಲ್ಲೇಖಿಸಿದ ಮುಖ್ಯಮಂತ್ರಿ, ಭೂಮಿ ತಂತ್ರಜ್ಞಾನದಡಿ ಈ ಹಿಂದೆಯೆ ಡಿಜಿಟಲೀಕರಣವಾಗಿದೆ. 62 ಲಕ್ಷ ಭೂಮಿಯುಳ್ಳ ಹಾಗೂ 16 ಲಕ್ಷ ಭೂ ರಹಿತರನ್ನೂ ತಂತ್ರಾಂಶದಲ್ಲಿ ಸೇರಿಸಲಾಗಿದೆ. ಫ್ರೂಟ್ಸ್ ಯೋಜನೆಯನ್ನು ಎಲ್ಲ ರಾಜ್ಯಗಳೂ ಅಳವಡಿಸಿಕೊಳ್ಳುತ್ತಿವೆ ಎಂದು ಅವರು ಹೇಳಿದರು.

ಈ ತಂತ್ರಾಂಶವನ್ನು ನಿರಂತರವಾಗಿ ಸುಧಾರಣೆ ಮಾಡಲಾಗುತ್ತಿದೆ. ಇದರ ಉಪಯೋಗ ಪಡೆದು ರೈತರನ್ನು ಜೋಡಿಸಲಾಗಿದೆ. ಕೇಂದ್ರ ಸರಕಾರದ ಸ್ವಮಿತ್ವ ಯೋಜನೆಯನ್ನು ಕರ್ನಾಟಕದಲ್ಲಿ ಅಭಿಯಾನದ ರೀತಿಯಲ್ಲಿ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು.

ಕ್ರಾಂತಿಕಾರಿ ನ್ಯಾನೋ ಯೂರಿಯಾ: ಕೃಷಿ ಕ್ಷೇತ್ರದಲ್ಲಿ ನ್ಯಾನೋ ಯೂರಿಯಾ ಕ್ರಾಂತಿಯನ್ನು ಉಂಟುಮಾಡಿದ್ದು, ಮೊದಲ ನ್ಯಾನೋ ಯೂರಿಯಾ ಘಟಕ ಬೆಂಗಳೂರಿನಲ್ಲಿದೆ.  ಅಧ್ಯಯನ ಮಾಡಿ ರೈತರಿಗೂ ಪರಿಚಯಿಸಲಾಗಿದೆ. ಮುಂದಿನ ದಿನಗಳಲ್ಲಿ ರಾಷ್ಟ್ರಮಟ್ಟದಲ್ಲಿ ಉತ್ತಮ ಪ್ರತಿಕ್ರಿಯೆ ಹಾಗೂ ಬೆಂಬಲ ಸಿಗಲಿದೆ ಎಂದು ಮುಖ್ಯಮಂತ್ರಿ ವಿಶ್ವಾಸ ವ್ಯಕ್ತಪಡಿಸಿದರು. 

ಡಿಜಿಟಲ್ ತಂತ್ರಜ್ಞಾನದ ಮೂಲಕ ರೈತರೇ ತಮ್ಮ ಭೂಮಿಯ ಸಮೀಕ್ಷೆ ಮಾಡುತ್ತಿದ್ದಾರೆ. ಬೆಳೆ ಸಮೀಕ್ಷೆಯನ್ನು ರೈತರೆ ಮಾಡುತ್ತಿದ್ದಾರೆ. ನೈಸರ್ಗಿಕ ಕೃಷಿ ದೀರ್ಘಕಾಲಿಕ ಯೋಜನೆಯಾಗಿದ್ದು  ಈ ಕುರಿತು ಸಂಶೋಧನೆ ಹಾಗೂ ಪ್ರಮಾಣೀಕರಣ ಅತ್ಯಂತ ಪ್ರಮುಖ ಅಂಶಗಳು ಮುಖ್ಯಮಂತ್ರಿ ತಿಳಿಸಿದರು.

ನೈಸರ್ಗಿಕ ಕೃಷಿಯಲ್ಲಿ ಸಕ್ರಿಯ: ಪ್ರಧಾನಿ ನರೇಂದ್ರ ಮೋದಿಯವರ ರೈತರ ಆದಾಯ ದ್ವಿಗುಣಗೊಳಿಸುವ ಆಶಯದಂತೆ ಕರ್ನಾಟಕವು ಮಹಾರಾಷ್ಟ್ರ ಹಾಗೂ ಗುಜರಾತ್ ರಾಜ್ಯಗಳೊಂದಿಗೆ ನೈಸರ್ಗಿಕ ಕೃಷಿಯನ್ನು ಸಕ್ರಿಯವಾಗಿ ಕೈಗೊಂಡಿದೆ. ರಾಜ್ಯದಲ್ಲಿ 5 ಕೃಷಿ ಹಾಗೂ ತೋಟಗಾರಿಕಾ ವಿಶ್ವವಿದ್ಯಾಲಯಗಳಿದ್ದು, ಇವುಗಳ ನಿರಂತರ ಮೇಲ್ವಿಚಾರಣೆಯಲ್ಲಿ ನೈಸರ್ಗಿಕ ಕೃಷಿಯನ್ನು ತಲಾ ಒಂದು ಸಾವಿರ ಎಕರೆ ಪ್ರದೇಶದಲ್ಲಿ ಕೈಗೊಳ್ಳಲಾಗಿದೆ ಬೆಳೆಗಳ ಗುಣಮಟ್ಟದಿಂದ ಹಿಡಿದು, ಉತ್ಪನ್ನ, ಪರೀಕ್ಷೆಗಳನ್ನು ಕೃಷಿ ಪ್ರಯೋಗಾಲಯದಲ್ಲಿ ಕೈಗೊಳ್ಳಲಾಗಿದೆ ಎಂದು ಅವರು ವಿವರಿಸಿದರು. 

ನೈಸರ್ಗಿಕ ಕೃಷಿಗೆ ಪರಿವರ್ತನೆ: ರಾಜ್ಯದಲ್ಲಿ 2.4 ಲಕ್ಷ ಎಕರೆ ಭೂ ಪ್ರದೇಶದಲ್ಲಿ ಕೈಗೊಂಡಿರುವ  ಸಾವಯವ ಕೃಷಿ ಭೂಮಿಯನ್ನು ನೈಸರ್ಗಿಕ ಕೃಷಿಗೆ ಕ್ರಮೇಣ ಪರಿವರ್ತಿಸಲಾಗುತ್ತಿದೆ.  ಮುಂದಿನ ಮಾರ್ಚ್ ಒಳಗೆ ಹೊಸದಾಗಿ 1 ಲಕ್ಷ ಎಕರೆ ಪ್ರದೇಶವನ್ನು ನೈಸರ್ಗಿಕ ಕೃಷಿಗೆ ಪರಿವರ್ತನೆ ಮಾಡಲು ಗುರಿ ನಿಗದಿಪಡಿಸಲಾಗಿದೆ ಮುಖ್ಯಮಂತ್ರಿ ಹೇಳಿದರು.

ನೈಸರ್ಗಿಕ ಕೃಷಿಗೆ 41,434 ಕೃಷಿಕರನ್ನು ಆಯ್ಕೆ ಮಾಡಲಾಗಿದ್ದು, 1100 ತರಬೇತಿ ಕಾರ್ಯಕ್ರಮಗಳು, 200 ಕ್ಷೇತ್ರ ಭೇಟಿಗಳನ್ನು ಕೈಗೊಂಡಿದೆ ಹಾಗೂ ಕಾರ್ಯಾಗಾರಗಳನ್ನು ಕೈಗೊಳ್ಳಲಾಗಿದೆ. ಒಟ್ಟಾರೆ ಯೋಜನೆಯನ್ನು ಅಭಿಯಾನ ಮಾದರಿಯಲ್ಲಿ ಕಾರ್ಯಗತ ಮಾಡಲಾಗುತ್ತಿದೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು. 

ಮಣ್ಣಿನ ಫಲವತ್ತತೆ: ನೈಸರ್ಗಿಕ ಕೃಷಿಯಲ್ಲಿ ವೈಜ್ಞಾನಿಕ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಮಣ್ಣಿನ ಫಲವತ್ತತೆ ಕಾಯ್ದುಕೊಳ್ಳಲು ಒತ್ತು ನೀಡಲಾಗಿದೆ. ಮಣ್ಣಿನಲ್ಲಿ ಸಾರಾಜನಕ ಹಾಗೂ ಇಂಗಾಲ ಪ್ರಮಾಣ ಸೇರಿದಂತೆ ನೈಸರ್ಗಿಕ ಗೊಬ್ಬರ ಬಳಕೆಗೂ ಮಹತ್ವ ನೀಡಲಾಗಿದೆ. ಪೈಟೋಸೈನಾಸಿಸಿಸ್ ಪರಿಣಾಮದ ಬಗ್ಗೆ  ಅಧ್ಯಯನ ಕೈಗೊಳ್ಳಲಾಗಿದೆ. ಈ ಕುರಿತಂತೆ ಅಧ್ಯಯನಗಳು ಉತ್ತಮ ಇಳುವರಿ ಹಾಗೂ ಉತ್ಪಾದನೆಗೆ ಎಡೆ ಮಾಡಿಕೊಡುತ್ತದೆ ಎಂದು ಅವರು ತಿಳಿಸಿದರು. ಈ ಸಂದರ್ಭದಲ್ಲಿ ರಾಜ್ಯ ಸರಕಾರದ ಹಿರಿಯ ಅಧಿಕಾರಿಗಳು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X