ಬೆಂಗಳೂರು: ವಾಯು ವಿಹಾರಕ್ಕೆ ತೆರಳಿದ್ದ ಯುವಕ ಮೃತ್ಯು
ಸಾಂದರ್ಭಿಕ ಚಿತ್ರ
ಬೆಂಗಳೂರು (Bengaluru), ಅ.24: ವಾಯು ವಿಹಾರಕ್ಕೆ ತೆರಳಿದ್ದ ಯುವಕನೋರ್ವ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಜಾಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಇಲ್ಲಿನ ಬಿಇಎಲ್ ಮೈದಾನದಲ್ಲಿ ನಡೆದಿದ್ದು, ಸದ್ಯಕ್ಕೆ ಮೃತಪಟ್ಟಿರುವ ಯುವಕನ ಹೆಸರು ತಿಳಿದುಬಂದಿಲ್ಲ.
ಮಂಗಳವಾರ ಬೆಳಗ್ಗೆ ಬಿಇಎಲ್ ಮೈದಾನದಲ್ಲಿ ಜಾಗಿಂಗ್ ಮಾಡುವಾಗ ಇದ್ದಕ್ಕಿದ್ದಂತೆ ಕುಸಿದುಬಿದ್ದಿದ್ದಾಗ, ಸಾರ್ವಜನಿಕರು ಕೂಡಲೇ ಸಮೀಪದ ಆಸ್ಪತ್ರೆ ಕರೆದೊಯ್ದಿದ್ದಾರೆ. ಈ ವೇಳೆ ಮಾರ್ಗಮಧ್ಯೆ ಮೃತಪಟ್ಟಿರುವುದಾಗಿ ಹೇಳಲಾಗುತ್ತಿದೆ.
ಹೃದಯಾಘಾತದಿಂದ ಸಾವನ್ನಪ್ಪಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಸಾವಿಗೆ ನಿಖರ ಕಾರಣ ತಿಳಿಯಲಿದೆ. ಈ ಸಂಬಂಧ ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಶಿವಮೊಗ್ಗ : ಬೈಕಿನಲ್ಲಿ ಬಂದ ತಂಡದಿಂದ ಯುವಕನಿಗೆ ಹಲ್ಲೆ; ದೂರು ದಾಖಲು
Next Story