Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಯುವ ಸಮೂಹದ ಸಹನೆ ಕೆಣಕುತ್ತಿರುವ ಕೇಂದ್ರ...

ಯುವ ಸಮೂಹದ ಸಹನೆ ಕೆಣಕುತ್ತಿರುವ ಕೇಂದ್ರ ಸರಕಾರ: ಸಿದ್ದರಾಮಯ್ಯ ಕಿಡಿ

ಎಸ್‍ಎಸ್‍ಸಿ ಪರೀಕ್ಷೆಗಳಲ್ಲಿ ಕನ್ನಡ ಕೈ ಬಿಟ್ಟ ವಿಚಾರ

29 Oct 2022 6:00 PM IST
share
ಯುವ ಸಮೂಹದ ಸಹನೆ ಕೆಣಕುತ್ತಿರುವ ಕೇಂದ್ರ ಸರಕಾರ: ಸಿದ್ದರಾಮಯ್ಯ ಕಿಡಿ
ಎಸ್‍ಎಸ್‍ಸಿ ಪರೀಕ್ಷೆಗಳಲ್ಲಿ ಕನ್ನಡ ಕೈ ಬಿಟ್ಟ ವಿಚಾರ

ಬೆಂಗಳೂರು, ಅ.29: ಕೇಂದ್ರ ಸಿಬ್ಬಂದಿ ಆಯ್ಕೆ ಆಯೋಗ(ಎಸ್‍ಎಸ್‍ಸಿ) ನಾನಾ ಭದ್ರತಾ ಪಡೆಗಳ ಸಿಬ್ಬಂದಿ ಆಯ್ಕೆಗೆ ಜನವರಿಯಲ್ಲಿ ನಡೆಸಲಿರುವ ಪರೀಕ್ಷೆಗಳಿಂದ ಕನ್ನಡವನ್ನು ಕೈಬಿಟ್ಟು ನಾಡಿನ ಯುವ ಸಮೂಹದ ಸಹನೆಯನ್ನು ಕೇಂದ್ರ ಸರಕಾರ ತೀವ್ರವಾಗಿ ಕೆಣಕುತ್ತಿದ್ದು ಇದನ್ನು ಇನ್ನು ಸಹಿಸಲು ಸಾಧ್ಯವಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಗಾರಿದ್ದಾರೆ.

ಶನಿವಾರ ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ನೇತೃತ್ವದ ಅಧಿಕೃತ ಭಾಷೆಗಳ ಸಂಸತ್ತಿನ ಸಮಿತಿಯು ಇತ್ತೀಚಿಗೆ ರಾಷ್ಟ್ರಪತಿಗಳಿಗೆ ನೀಡಿದ 11ನೇ ವರದಿಯಲ್ಲಿ ಎಲ್ಲ ರಾಜ್ಯಗಳಲ್ಲಿ ಸ್ಥಳೀಯ ಭಾಷೆಗಳಿಗೆ ಆದ್ಯತೆ ನೀಡಬೇಕು ಎಂದು ಶಿಫಾರಸ್ಸು ಮಾಡಿದೆ ಎಂದು ಹೇಳಿದ್ದಾರೆ.

ಕಲಿಕೆಯಲ್ಲಿ ಮಾತೃಭಾಷೆಗಳಿಗೆ ಆದ್ಯತೆ ನೀಡಿದ ಬಳಿಕ ಉದ್ಯೋಗದ ಪ್ರಶ್ನೆ ಬಂದಾಗ ಮಾತ್ರ ಹಿಂದಿಯಲ್ಲೇ ಪ್ರವೇಶ ಪರೀಕ್ಷೆ ಬರೆಯಬೇಕು ಎನ್ನುವುದು ಕಪಟತನವಾಗುತ್ತದೆ. ರಾಷ್ಟ್ರಕವಿ ಕುವೆಂಪು ಇದನ್ನೇ ತ್ರಿಭಾಷೆಶೂಲ ಎಂದು ಕರೆದಿದ್ದಾರೆ. ಕೋಟಿ ಕಂಠಗಳಲ್ಲಿ ಕನ್ನಡ ಗೀತೆ ಹಾಡಿಸಿದ ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ‘ಪ್ರತಿಯೊಬ್ಬ ಕನ್ನಡಿಗನಿಗೆ ಆರ್ಥಿಕ ಮತ್ತು ಸಾಮಾಜಿಕ ಭದ್ರತೆ ಕಲ್ಪಿಸಲಾಗುವುದು’ ಎಂದು ನೆನ್ನೆ ದಿನ ಭಾಷಣ ಮಾಡಿದ್ದಾರೆ ಎಂದು ಅವರು ತಿಳಿಸಿದ್ದಾರೆ. 

ಆದರೆ, ವಾಸ್ತವದಲ್ಲಿ ಮಾತ್ರ ಕನ್ನಡಿಗರ ಪಾಲಿನ ಉದ್ಯೋಗವನ್ನು ಕಿತ್ತುಕೊಂಡು ಸಾಮಾಜಿಕವಾಗಿ ಅಭದ್ರತೆ ಸೃಷ್ಟಿಸಿ, ಆರ್ಥಿಕ ಸ್ವಾವಲಂಬನೆಯ ಬೇರುಗಳನ್ನು ಕತ್ತರಿಸುತ್ತಿದೆ. ಡಬಲ್ ಎಂಜಿನ್ ಸರಕಾರಗಳ ಈ ತಂತ್ರ-ಕುತಂತ್ರ ಕೇಂದ್ರ ಮತ್ತು ರಾಜ್ಯಗಳ ನಡುವೆ ಇದ್ದ ಸಹೋದರತ್ವವನ್ನು ಹಂತ ಹಂತವಾಗಿ ಕೊಲ್ಲುತ್ತಾ ಬರುತ್ತಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಕೇಂದ್ರ, ರಾಜ್ಯಗಳ ನಡುವಿನ ಸೌಹಾರ್ದ ಪರಂಪರೆಯ ಮೇಲೆ ತನ್ನ ವಿಕೃತ ದಾಳಿಯನ್ನು ಆಕ್ರಮಣಕಾರಿಯಾಗಿ ಮುಂದುವರೆಸಿರುವ ಕೇಂದ್ರ, ಕನ್ನಡ ನಾಡಿನ ಯುವಕ, ಯುವತಿಯರ ಪಾಲಿನ ಉದ್ಯೋಗವನ್ನು ಸಾರಾಸಗಟಾಗಿ ಕಿತ್ತುಕೊಳ್ಳುತ್ತಿದೆ. ಕಳೆದ ಒಂಬತ್ತು ವರ್ಷಗಳಿಂದ ಯಾವ ಕ್ಷೇತ್ರದಲ್ಲೂ ಉದ್ಯೋಗ ಸೃಷ್ಟಿಸಲು ಸಾಧ್ಯವಾಗದ ಕೇಂದ್ರ ಸಹಜವಾಗಿ ಬಂದಿರುವ ಕನ್ನಡ ನಾಡಿನ ಮತ್ತು ರಾಜ್ಯಗಳ ಪಾಲಿನ ಉದ್ಯೋಗವನ್ನು ಕುತಂತ್ರದ ಮೂಲಕ ಕಿತ್ತುಕೊಳ್ಳುತ್ತಿದೆ ಎಂದು ಅವರು ಟೀಕಿಸಿದ್ದಾರೆ.

ಲಾಠಿ ಹಿಡಿದವನೇ ದೊಣ್ಣೆ ನಾಯಕ ಎನ್ನುವ ನಾಣ್ಣುಡಿಯಂತೆ ಕೇಂದ್ರ ಸರಕಾರ ತನ್ನ ಅಧಿಕಾರದ ದರ್ಪವನ್ನು ರಾಜ್ಯಗಳ ಪಾಲಿನ ಪರಮಾಧಿಕಾರವನ್ನು ಕಿತ್ತುಕೊಳ್ಳಲು ಬಳಸುತ್ತಿದೆ. ಒಂದು ಕಡೆ ಕೇಂದ್ರದ ಉದ್ಯೋಗಗಳು ಕನ್ನಡಿಗರು ಮತ್ತು ದಕ್ಷಿಣ ಭಾರತದ ರಾಜ್ಯಗಳ ಯುವ ಸಮೂಹದ ಕೈಗೆಟುಕದಂತೆ ಮಾಡುತ್ತಿದೆ. ಮತ್ತೊಂದು ಕಡೆ ಇಡೀ ದೇಶದ ಪೊಲೀಸ್ ವ್ಯವಸ್ಥೆಯನ್ನು ಕೇಂದ್ರದ ಹಿಡಿತಕ್ಕೆ ತೆಗೆದುಕೊಳ್ಳುವ ಮೊದಲ ಹಂತವಾಗಿ ಎಲ್ಲ ರಾಜ್ಯಗಳ ಪೊಲೀಸ್ ಸಿಬ್ಬಂದಿ ಕೇಂದ್ರ ಸೂಚಿಸುವ ಸಮವಸ್ತ್ರವನ್ನೇ ಧರಿಸಬೇಕು ಎನ್ನುವ ಮಾತುಗಳನ್ನು ಆಡತೊಡಗಿದೆ ಎಂದು ಅವರು ತಿಳಿಸಿದ್ದಾರೆ.

ಬ್ಯಾಂಕ್ ಹುದ್ದೆಗಳ ಪ್ರವೇಶ ಪರೀಕ್ಷೆಯಲ್ಲಿ ಕನ್ನಡದ ಕೊರಳು ಹಿಚುಕುತ್ತಿದ್ದ ಕೇಂದ್ರದ ನೀತಿ ವಿರುದ್ಧ ಕನ್ನಡ ನಾಡು ನಿರಂತರವಾಗಿ ಧ್ವನಿ ಎತ್ತಿ ತನ್ನ ಹಕ್ಕನ್ನು ಕಾಪಾಡಿಕೊಳ್ಳುತ್ತಿದೆ ಎನ್ನುವ ಹೊತ್ತಲ್ಲೇ ಇಂತಹ ಹತ್ತಾರು ದಾಳಿಗಳನ್ನು ನಾನಾ ರೀತಿಗಳಲ್ಲಿ ಕೇಂದ್ರ ಮುಂದುವರೆಸಿದೆ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಬಿಎಸ್‍ಎಫ್, ಕೇಂದ್ರೀಯ ಕೈಗಾರಿಕಾ ಪಡೆ, ಸಚಿವಾಲಯ ಭದ್ರತಾ ಪಡೆ, ಅಸ್ಸಾಂ ರೈಫಲ್ಸ್ ಸೇರಿದಂತೆ ನಾನಾ ಕೇಂದ್ರ ಪಡೆಗಳಿಗೆ ಜನವರಿಯಲ್ಲಿ ನಡೆಯುತ್ತಿರುವ ಪರೀಕ್ಷೆಯನ್ನು ಕೇವಲ ಹಿಂದಿ ಮತ್ತು ಇಂಗ್ಲಿಷ್ ನಲ್ಲಿ ನಡೆಸುವ ತೀರ್ಮಾನವನ್ನು ಕೇಂದ್ರ ತಕ್ಷಣ ಹಿಂದಕ್ಕೆ ಪಡೆದುಕೊಳ್ಳಬೇಕು. ಕನ್ನಡದಲ್ಲೂ ಪರೀಕ್ಷೆ ಬರೆಯಲು ಅವಕಾಶ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

‘ರಾಜ್ಯದ ಭದ್ರತಾ ಪಡೆಗಳ, ಪೊಲೀಸ್ ಸಿಬ್ಬಂದಿಯ ಸಮವಸ್ತ್ರ ಆಗಿರಬಹುದು, ಕೇಂದ್ರ ಭದ್ರತಾ ಸಿಬ್ಬಂದಿ ಆಯ್ಕೆ ಪರೀಕ್ಷೆಯಲ್ಲಿ ತನ್ನ ಮಾತೃಭಾಷೆಯಲ್ಲಿ ಪರೀಕ್ಷೆ ಬರೆಯುವ ಹಕ್ಕು ಕನ್ನಡಿಗರ ಪರಮಾಧಿಕಾರ. ಕೇಂದ್ರಕ್ಕೆ ಅತಿಹೆಚ್ಚು ತೆರಿಗೆ ಪಾಲನ್ನು ನೀಡುವ ಮೂಲಕ ಉತ್ತರ ಭಾರತದ ಅಭಿವೃದ್ಧಿಗೆ ಹೆಚ್ಚಿನ ಪಾಲು ಕೊಡುತ್ತಿರುವುದು ಕರ್ನಾಟಕದ ಜನತೆ.ಈ ಜನತೆಯ ಪಾಲಿನ ಉದ್ಯೋಗವನ್ನು ಕಿತ್ತುಕೊಳ್ಳುವುದು ಉಂಡ ಮನೆಗೆ ದ್ರೋಹ ಬಗೆಯುವ ಕೃತ್ಯ. ಕನ್ನಡಿಗರ ಸಹನೆಯನ್ನು ಮತ್ತೆ ಮತ್ತೆ ಕೆಣಕುವ ಪಿತೂರಿ ಪಾಂಡಿತ್ಯವನ್ನು ಕೇಂದ್ರ ತಕ್ಷಣ ನಿಲ್ಲಿಸಬೇಕು'

-ಸಿದ್ದರಾಮಯ್ಯ ವಿಪಕ್ಷ ನಾಯಕ

share
Next Story
X