Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ...

ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

31 Oct 2022 9:03 PM IST
share
ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ಬೆಂಗಳೂರು, ಅ.31: ಬೆಳಗಾವಿ ಜಿಲ್ಲೆಯ ಗೋಕಾಕ್ ಕ್ಷೇತ್ರದಿಂದ 2018ರಲ್ಲಿ ನಡೆದ ಸಾರ್ವತ್ರಿಕ ಚುನಾವಣೆ ಹಾಗೂ 2019ರಲ್ಲಿ ನಡೆದ ಉಪ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ರಮೇಶ್ ಜಾರಕಿಹೊಳಿ, ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ದಾಖಲಾತಿಗಳಲ್ಲಿ ಅಪೂರ್ಣ ಮಾಹಿತಿ ನೀಡಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಲಕ್ಷ್ಮಣ್ ದೂರು ನೀಡಿದ್ದಾರೆ.

ಸೋಮವಾರ ನಗರದಲ್ಲಿ ಶೇಷಾದ್ರಿ ರಸ್ತೆಯಲ್ಲಿರುವ ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿಗೆ ದೂರು ಸಲ್ಲಿಸಿರುವ ಅವರು, ರಮೇಶ್ ಜಾರಕಿಹೊಳಿ ಈ ಎರಡು ಚುನಾವಣೆಗಳ ನಾಮಪತ್ರ ಸಲ್ಲಿಕೆ ವೇಳೆ ಪ್ರಮಾಣ ಪತ್ರಗಳಲ್ಲಿ ಅಪೂರ್ಣವಾದ ಮಾಹಿತಿ ನೀಡುವುದರ ಜೊತೆಗೆ, ದುರುದ್ದೇಶ ಪೂರ್ವಕವಾಗಿ ಅನೇಕ ಮಾಹಿತಿಗಳನ್ನು ಮುಚ್ಚಿಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ.

ತಮ್ಮ ಆಸ್ತಿ ಮತ್ತು ಜವಾಬ್ದಾರಿ ತಕ್ತೆಯಲ್ಲಿ ಸುಳ್ಳು ಅಂಕಿ ಅಂಶಗಳನ್ನು ನಮೂದಿಸಿದ್ದಾರೆ. ಇವರ ಕುಟುಂಬದ ಸದಸ್ಯರು ನಿರ್ದೇಶಕರಾಗಿ ಇರುವ ಸೌಭಾಗ್ಯಲಕ್ಷ್ಮಿ ಶುಗರ್ಸ್ ಕಾರ್ಖಾನೆ ಸುಮಾರು 578 ಕೋಟಿ ರೂ.ಸಾಲ  ಮಾಡಿದ್ದು, ಇದರ ವಿವರಗಳನ್ನು ಪ್ರಮಾಣ ಪತ್ರದಲ್ಲಿ ಮುಚ್ಚಿಟ್ಟಿದ್ದಾರೆ ಎಂದು ಲಕ್ಷ್ಮಣ್ ದೂರಿದ್ದಾರೆ.

ರೈತರಿಗೆ ಸುಮಾರು 50 ಕೋಟಿ ರೂ., ಆದಾಯ ತೆರಿಗೆ ಇಲಾಖೆಗೆ 150 ಕೋಟಿ ರೂ. ಪಾವತಿ ಮಾಡಬೇಕಾಗಿರುವ ವಿವರವನ್ನು ನೀಡಿಲ್ಲ. ಬಾಕಿ ಹಣ ಪಾವತಿ ಮಾಡುವ ಸಂಬಂಧ ಹೈಕೋರ್ಟ್‍ನಲ್ಲಿ ದಾವೆ ಹೂಡಿದ್ದು 2019ರ ನ.28ರಂದು ಸಾಲದ ಹಣದ ಶೇ.50ರಷ್ಟನ್ನು ಆರು ವಾರದಲ್ಲಿ ಪಾವತಿ ಮಾಡುವಂತೆ ನ್ಯಾಯಾಲಯ ನಿರ್ದೇಶನ ನೀಡಿದೆ. ಆದರೆ ಇಲ್ಲಿಯವರೆಗೆ ಹಣ ಪಾವತಿ ಮಾಡಿಲ್ಲ ಎಂದು ಅವರು ಆರೋಪಿಸಿದ್ದಾರೆ.

ಸೌಭಾಗ್ಯ ಲಕ್ಷ್ಮಿ ಸಕ್ಕರೆ ಕಾರ್ಖಾನೆ ವ್ಯವಹಾರ, ಅಪೆಕ್ಸ್ ಬ್ಯಾಂಕಿನಲ್ಲಿ ಸಾಲ ಪಡೆದಿರುವುದು, ಕುಟುಂಬದ ಸದಸ್ಯರ ಸಾಲದ ವ್ಯವಹಾರಗಳು, ಬೇರೆ ಬೇರೆ ಬ್ಯಾಂಕುಗಳಲ್ಲಿ ಪಡೆದಿರುವ ಸಾಲಗಳ ವಿವರಗಳನ್ನು ನಿಖರವಾಗಿ ಮತ್ತು ಪಾರದರ್ಶಕವಾಗಿ ನೀಡದೆ ಸುಳ್ಳು ಪ್ರಮಾಣ ಪತ್ರ ಸಲ್ಲಿಕೆ ಮಾಡಿ ಅವರು ಅಪರಾಧ ಎಸಗಿದ್ದಾರೆ ಎಂದು ಲಕ್ಷ್ಮಣ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಕೇಂದ್ರ ಚುನಾವಣಾ ಆಯೋಗವು ರಮೇಶ್ ಜಾರಕಿಹೊಳಿ ಸಲ್ಲಿಸಿರುವ ಸುಳ್ಳು ಪ್ರಮಾಣ ಪತ್ರವನ್ನು ಗಂಭೀರವಾಗಿ ಪರಿಗಣಿಸಿ, ಈ ಪ್ರಕರಣವನ್ನು ಸಿಬಿಡಿಟಿ ಗೆ ಮತ್ತು ಈ.ಡಿಗೆ ವರ್ಗಾಯಿಸಬೇಕು ಎಂದು ಲಕ್ಷ್ಮಣ್ ಕೋರಿದ್ದಾರೆ.

ಅವರ ಕುಟುಂಬದ ಸದಸ್ಯರು ಭಾಗಿಯಾಗಿರುವ ಸುಮಾರು 578 ಕೋಟಿ ರೂ.ಗಳ ಸೌಭಾಗ್ಯ ಲಕ್ಷ್ಮಿ ಸಕ್ಕರೆ ಕಾರ್ಖಾನೆಯ ವ್ಯವಹಾರಗಳನ್ನು ರಮೇಶ್ ಜಾರಕಿಹೊಳಿ ಪ್ರಮಾಣ ಪತ್ರದಲ್ಲಿ ವಿವರವಾಗಿ ನಮೂದಿಸದೆ ಬಚ್ಚಿಟ್ಟು ಅಪರಾಧ ಎಸಗಿದ್ದಾರೆ. ಚುನಾವಣಾ ಆಯೋಗವು ಈ ಪ್ರಕರಣವನ್ನು ಉದ್ದೇಶಪೂರ್ವಕ ಅಪರಾಧವಾಗಿ ಪರಿಗಣಿಸಿ ಆದ್ಯತೆಯ ಮೇಲೆ ತನಿಖೆಗೆ ವಹಿಸಬೇಕು ಎಂದು ಅವರು ದೂರಿನಲ್ಲಿ ಮನವಿ ಮಾಡಿದ್ದಾರೆ.

ಚುನಾವಣಾ ಅಧಿಕಾರಿಗೆ ದೂರು ನೀಡುವ ಸಂದರ್ಭದಲ್ಲಿ ಕೆಪಿಸಿಸಿ ಮಾಧ್ಯಮ ವಿಭಾಗದ ಉಪಾಧ್ಯಕ್ಷ ರಮೇಶ್ ಬಾಬು ಉಪಸ್ಥಿತರಿದ್ದರು.

share
Next Story
X