ನಟ ಶಶಿಕುಮಾರ್, ಮಾಜಿ ಸಂಸದ ಮುದ್ದಹನುಮೇಗೌಡ ಸೇರಿ ಹಲವರು BJP ಸೇರ್ಪಡೆ
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಸಮ್ಮುಖದಲ್ಲಿ ಮಾಜಿ ಸಂಸದ ಮುದ್ದಹನುಮೇಗೌಡ (S. P. Muddahanumegowda), ಚಿತ್ರ ನಟ ಹಾಗೂ ಮಾಜಿ ಸಂಸದರಾಗಿರುವ ಶಶಿಕುಮಾರ್ (Shashikumar) ಸೇರಿದಂತೆ ಹಲವರು ಬುಧವಾರ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿಗೆ ಸೇರ್ಪಡೆಯಾದರು.
ನಿವೃತ್ತ ಐಎಎಸ್ ಅಧಿಕಾರಿ ಬಿ. ಎಚ್. ಅನಿಲ್ ಕುಮಾರ್, ಸೇವಾದಳದ ರಾಜ್ಯ ಉಪಾಧ್ಯಕ್ಷ ಹನುಮಂತರಾವ್ ಜವಳಿ, ರಮೇಶ ಮುನಿಯಪ್ಪ, ಜಿ. ವೆಂಕಟಾಚಲಯ್ಯ ಅವರು ತಮ್ಮ ಬೆಂಬಲಿಗರೊಂದಿಗೆ ಇದೇ ವೇಳೆ ಬಿಜೆಪಿಗೆ ಸೇರ್ಪಡೆಗೊಂಡರು.
ಇದನ್ನೂ ಓದಿ: ಬಿಎಂಟಿಸಿ ಬಸ್ ಹರಿದು ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
ಈ ಸಂದರ್ಭದಲ್ಲಿ ಸಚಿವರಾದ ಗೋವಿಂದ ಕಾರಜೋಳ, ಡಾ. ಅಶ್ವತ್ಥ್ ನಾರಾಯಣ, ಎಸ್.ಟಿ ಸೋಮಶೇಖರ್, ವಿಧಾನ ಪರಿಷತ್ ಸದಸ್ಯರಾದ ಲಕ್ಷ್ಮಣ ಸವದಿ, ಸಿ.ಪಿ ಯೋಗೇಶ್ವರ್ ಮತ್ತಿತರರು ಹಾಜರಿದ್ದರು.
Next Story