-

ಸಣ್ಣ ಸಣ್ಣ ಕುಶಲಕರ್ಮಿ ಸಮುದಾಯಗಳಿಗೆ ಆರ್ಥಿಕ ನೆರವು: ಮುಖ್ಯಮಂತ್ರಿ

-

ಬೆಂಗಳೂರು, ನ. 24: ಅಗರಬತ್ತಿ ಉದ್ಯಮಕ್ಕೆ ರಾಜ್ಯ ಸರ್ಕಾರದಿಂದ ಎಲ್ಲ ಸಹಕಾರ ನೀಡಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.

ಗುರುವಾರ ನಗರದ ಅರಮನೆ ಮೈದಾನದಲ್ಲಿ ಅಖಿಲ ಭಾರತ ಅಗರಬತ್ತಿ ಉತ್ಪಾದಕರ ಸಂಘದ ವತಿಯಿಂದ ಆಯೋಜಿಸಿದ್ದ ಐಮಾ ಎಕ್ಸ್ ಪೋ ( AIAMA )2022 ಉದ್ಘಾಟಿಸಿ ಮಾತನಾಡಿದರು.

ಅಗರಬತ್ತಿ ಉದ್ಯಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರಿಗೆ ಉದ್ಯೋಗ ನೀಡುವುದರಿಂದ ಹೆಚ್ಚಿನ ಅನುಕೂಲವಾಗುತ್ತದೆ. ಗ್ರಾಮೀಣ ಪ್ರದೇಶದಲ್ಲಿ ಈ  ಉದ್ಯಮ ಹೆಚ್ಚು ಜನರಿಗೆ ಉದ್ಯೋಗ ನೀಡಿದೆ. ರಾಜ್ಯ ಸರ್ಕಾರವು ಸಣ್ಣ ಪುಟ್ಟ ಸಮುದಾಯಗಳಾದ ಕುಂಬಾರ ಕಮ್ಮಾರ, ಚಮ್ಮಾರ ಸೇದಂತೆ ಇತರ ಸಮುದಾಯಗಳಿಗೆ ಸಾಲ ನೀಡುವ ಯೋಜನೆ ಜಾರಿಗೆ ತರಲಾಗುತ್ತಿದೆ. ಆರ್ಥಿಕತೆ ಕೆಳ ಸ್ಥರದಿಂದ ಬಲಗೊಳ್ಳುತ್ತದೆ ಎಂದು ನಂಬಿರುವುದಾಗಿ ಮುಖ್ಯಮಂತ್ರಿ ತಿಳಿಸಿದರು.

ಪರಿಮಳದ ಜೊತೆಗೆ ಸಂತೋಷ ಹರಡುವ ಕೆಲಸ: ಅಗರಬತ್ತಿ ಉದ್ಯಮ ಪರಿಮಳದ ಜೊತೆಗೆ ಸಂತೋಷ ಹರಡುವ ಕೆಲಸ ಮಾಡುತ್ತಿದೆ. 250 ವರ್ಷಗಳಿಂದ ಪರಿಮಳದ ಜೊತೆಗೆ ಸಂತೋಷ ಹರಡುತ್ತಿದ್ದೀರಿ. ಯಾವುದೇ ಉದ್ಯಮ ಈ ರೀತಿ ಇಲ್ಲ. ಸಣ್ಣ ಸಣ್ಣ ಸಂತೋಷಗಳು ದೊಡ್ಡ ಸಂಭ್ರಮ ನೀಡುತ್ತಿವೆ. ಅಗರಬತ್ತಿ ಉದ್ಯಮಮಕ್ಕೆ ದೊಡ್ಡ ಇತಿಹಾಸವಿದೆ. ಇದೊಂದು ದೊಡ್ಡ ವಿಜ್ಞಾನ. ಪಶ್ಚಿಮಾತ್ಯ ದೇಶಗಳಲ್ಲಿ  ಕೃತಕ ಪರಿಮಳ ಸೃಷ್ಟಿಸುವ ಕೆಲಸ ಮಾಡುತ್ತಿದ್ದಾರೆ ಎಂದರು.

ಭಾರತ ಜೀವ ವೈವಿಧ್ಯವಿರುವ ದೇಶ. ನಮ್ಮಲ್ಲಿ ಪ್ರಾಕೃತಿಕವಾಗಿಯೇ ಪರಿಮಳ ಬೀರುವ ಉತ್ಪನ್ನಗಳು ದೊರೆಯುತ್ತಿವೆ. ನನ್ನ  ಕ್ಷೇತ್ರದಲ್ಲಿಯೂ ಒಬ್ಬರು ಸುಮಾರು 2000 ಎಕರೆ ಪ್ರದೇಶದಲ್ಲಿ  ಪುಷ್ಪ ಕೃಷಿ ಮಾಡುತ್ತಿದ್ದಾರೆ ಎಂದರು.

ಮಹಿಳೆಯರಿಗೆ ಉದ್ಯೋಗಾವಕಾಶ: ನಮ್ಮ ಸರ್ಕಾರ ಮಹಿಳೆಯರಿಗೆ ಸ್ತ್ರೀ ಸಾಮರ್ಥ್ಯ ಯೋಜನೆ ಜಾರಿಗೆ ತಂದಿದೆ ಅವರಿಗೆ 1.5 ಲಕ್ಷ ಸರ್ಕಾರ ನೀಡುತ್ತದೆ. 5 ಲಕ್ಷದವರೆಗೆ ಅನುದಾನ ನೀಡಲಾಗುತ್ತಿದೆ. ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೊಗ ಕಲ್ಪಿಸಲು ಅನುಕೂಲವಾಗುತ್ತದೆ. ಮಹಿಳೆಯರು ಹೆಚ್ಚಿನ ಪ್ರಮಾಣದಲ್ಲಿ ಉಳಿತಾಯ ಮಾಡುತ್ತಾರೆ. ಅವರು ಉತ್ಪಾದನೆಯಲ್ಲಿ ತೊಡಗಿದರೆ ಕುಟುಂಬದಲ್ಲಿ ಹೆಚ್ಚಿನ ಉಳಿತಾಯವಾಗಲಿದೆ. ಮಹಿಳೆಯರು ಮನೆಯಲ್ಲಿಯೇ ಕುಳಿತು ಕೆಲಸ ಮಾಡಬಹುದು. ಮಹಾತ್ಮಾ ಗಾಂಧಿ ಹೆಚ್ಚಿನ ಜನರಿಂದ ಉತ್ಪಾದನೆಯಾಗಬೇಕು ಎಂದು ಹೇಳಿದ್ದರು ಎಂದರು.

ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ,  ಐಮಾ ಅಧ್ಯಕ್ಷ ಅರ್ಜುನ್ ರಂಗಾ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of  Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
 

Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request. 

Help us delete comments that do not follow these guidelines by informing us (vbwebdesk@gmail.com). Let's work together to keep the conversation civil. 

www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು  www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು  ' ವಾರ್ತಾ ಭಾರತಿ' ಕಾದಿರಿಸಿದೆ. 

ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ  ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ.  ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.

Back to Top