Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಡಿ.1ರಿಂದ ‘ಸುಶಾಸನ ಮಾಸ’ 10ಸಾವಿರ...

ಡಿ.1ರಿಂದ ‘ಸುಶಾಸನ ಮಾಸ’ 10ಸಾವಿರ ಜನರಿಗೆ ಉದ್ಯೋಗ ಪತ್ರ: ಸಚಿವ ಅಶ್ವತ್ಥ ನಾರಾಯಣ

24 Nov 2022 9:41 PM IST
share
ಡಿ.1ರಿಂದ ‘ಸುಶಾಸನ ಮಾಸ’ 10ಸಾವಿರ ಜನರಿಗೆ ಉದ್ಯೋಗ ಪತ್ರ: ಸಚಿವ ಅಶ್ವತ್ಥ ನಾರಾಯಣ

ಬೆಂಗಳೂರು, ನ.24: ಮಾಜಿ ಪ್ರಧಾನಿ ವಾಜಪೇಯಿಯವರ ಸ್ಮರಣಾರ್ಥವಾಗಿ ತಮ್ಮ ನೇತೃತ್ವದ ಉನ್ನತ ಶಿಕ್ಷಣ, ಐಟಿ-ಬಿಟಿ ಮತ್ತು ಕೌಶಲ್ಯಾಭಿವೃದ್ಧಿ ಹಾಗೂ ಜೀವನೋಪಾಯ ಇಲಾಖೆಗಳಲ್ಲಿ ಡಿ.1ರಿಂದ ‘ಸುಶಾಸನ ಮಾಸ'ವನ್ನು ಆಚರಿಸಲಾಗುವುದು ಎಂದು ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಗುರುವಾರ ವಿಕಾಸಸೌಧದಲ್ಲಿ ಈ ಸಂಬಂಧ ಹಮ್ಮಿಕೊಳ್ಳಬೇಕಿರುವ ಕಾರ್ಯಕ್ರಮಗಳ ಕುರಿತು ಚರ್ಚಿಸಲು ಮೂರು ಇಲಾಖೆಗಳ ಉನ್ನತಾಧಿಕಾರಿಗಳ ಜತೆ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ‘ಸುಶಾಸನ ಮಾಸಾಚರಣೆ ಅಂಗವಾಗಿ ತಮ್ಮ ಇಲಾಖೆಗಳಲ್ಲಿನ ಹಲವು ಸುಧಾರಣಾ ಕ್ರಮಗಳನ್ನು ಇಡೀ ತಿಂಗಳು ಜನರಿಗೆ ತಿಳಿಸುವ ಸಲುವಾಗಿ ನಿರಂತರ ಕಾರ್ಯಕ್ರಮ ಗಳನ್ನು ಆಯೋಜಿಸಲಾಗುವುದು. ಡಿ.25 ರಂದು ಸಮಾರೋಪ ಸಮಾರಂಭ ನಡೆಯಲಿದ್ದು ಅಂದು ಮುಖ್ಯಮಂತ್ರಿ ಭಾಗವಹಿಸಲಿದ್ದಾರೆ. ಅಂದು ಹಲವು ಮಹತ್ವದ ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗುವುದು’ ಎಂದು ಹೇಳಿದರು.

ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಸಂಪೂರ್ಣವಾಗಿ ಹೊಸ ರೂಪ ನೀಡಲಾಗುವುದು. ಜತೆಗೆ ಕೌಶಲಾಭಿವೃದ್ಧಿ ಇಲಾಖೆಯ ಮೂಲಕ 10 ಸಾವಿರ ಜನರಿಗೆ ವಿವಿಧ ಸಂಸ್ಥೆಗಳಲ್ಲಿ ಉದ್ಯೋಗ ಕೊಡಿಸುವ ಸಂಬಂಧ ನೇಮಕಾತಿ ಪತ್ರಗಳನ್ನು ನೀಡಲಾಗುವುದು. ಹಾಗೆಯೇ, ಜಿಟಿಟಿಸಿ ಸುವರ್ಣ ಸಂಭ್ರಮದ ಅಂಗವಾಗಿ ಕಟ್ಟಿರುವ ನೂತನ ಕಟ್ಟಡವನ್ನು ಈ ಸಂದರ್ಭದಲ್ಲಿ ಲೋಕಾರ್ಪಣೆ ಮಾಡಲಾಗುವುದು ಎಂದು ಅಶ್ವತ್ಥ ನಾರಾಯಣ ತಿಳಿಸಿದರು.

ಅಲ್ಲದೆ, ತಾಂತ್ರಿಕ ಶಿಕ್ಷಣ ಇಲಾಖೆಗೆ ನೇಮಕಾತಿ ಮತ್ತು ವೃಂದ ನಿಯಮಗಳನ್ನು 15 ವರ್ಷಗಳ ನಂತರ ರೂಪಿಸಲಾಗುತ್ತಿದೆ. ಸುಶಾಸನ ಮಾಸಾಚರಣೆಯ ಅಂಗವಾಗಿ, ಉತ್ತಮ ವಿ.ವಿ.ಗಳು ಸೇರಿದಂತೆ ಹಲವು ವಿಭಾಗಗಳಲ್ಲಿ ಪ್ರಶಸ್ತಿಗಳನ್ನು ನೀಡುವ ಉದ್ದೇಶ ಇದೆ. ಈ ನಿಟ್ಟಿನಲ್ಲಿ ಸಿದ್ಧತೆ ನಡೆಸುವಂತೆ ಅಧಿಕಾರಿಗಳಿಗೆ ಅವರು ಸೂಚಿಸಿದರು.

ಇದಲ್ಲದೆ, ಎಲ್ಲ ಕಾಲೇಜುಗಳಲ್ಲೂ ಎನ್‍ಇಪಿ ಮತ್ತು ಅದರ ಪ್ರಗತಿ ಕುರಿತು ಪ್ರಬಂಧ ಮತ್ತು ಚರ್ಚಾಸ್ಪರ್ಧೆಗಳನ್ನು ಆಯೋಜಿಸಬೇಕು. ಜೊತೆಗೆ, ರಾಜ್ಯದಲ್ಲಿ ಅಸ್ತಿತ್ವಕ್ಕೆ ಬರುತ್ತಿರುವ ಎಳು ಹೊಸ ವಿ.ವಿ.ಗಳಲ್ಲಿ ಆಗಬೇಕಿರುವ ಹುದ್ದೆಗಳ ನೇಮಕಾತಿಗೆ ಅನುಮೋದನೆ ಕೊಡಲಾಗುವುದು ಎಂದು ಅವರು ವಿವರಿಸಿದರು.

ಉನ್ನತ ಶಿಕ್ಷಣ ಇಲಾಖೆಯಲ್ಲಿ ಪ್ರಾಧ್ಯಾಪಕರ ಭಡ್ತಿ ಇತ್ಯಾದಿ ವಿಚಾರಗಳು ಬಹುಕಾಲದಿಂದ ನೆನೆಗುದಿಗೆ ಬಿದ್ದಿವೆ. ಸುಶಾಸನ ಮಾಸಾಚರಣೆ ಸಂದರ್ಭದಲ್ಲಿ ಅವುಗಳನ್ನು ಬಗೆಹರಿಸಲಾಗುವುದು. ಇದರ ಜತೆಗೆ ಸುಗಮ ಮತ್ತು ಉತ್ತಮ ಆಡಳಿತದ ಅಂಗವಾಗಿ ತಂದಿರುವ ಸಮಗ್ರ ವಿವಿ ನಿರ್ವಹಣಾ ತಂತ್ರಾಂಶದ ಬಗ್ಗೆ ಹೆಚ್ಚಿನ ಅರಿವು ಮೂಡಿಸಲು ಕಾರ್ಯಾಗಾರಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಅವರು ತಿಳಿಸಿದರು.

ಜೀವನೋಪಾಯ ಇಲಾಖೆಯಡಿ ಬರುವ ಸ್ವಸಹಾಯ ಸಂಘಗಳು ರಾಜ್ಯದ ಅರ್ಥಿಕ ಅಭಿವೃದ್ಧಿಗೆ ಮಹತ್ತ್ವದ ಕಾಣಿಕೆ ನೀಡುತ್ತಿವೆ. ಇವುಗಳನ್ನು ಮತ್ತಷ್ಟು ಬಲಪಡಿಸಲು ಕ್ರಮ ಕೈಗೊಳ್ಳಲಾಗುವುದು. ಸುಶಾಸನ ಮಾಸಾಚರಣೆ ಅಂಗವಾಗಿ ಅರಿವು ಮತ್ತು ಜಾಗೃತಿ ಎರಡನ್ನೂ ಸಾಧಿಸುವ ಗುರಿ ಇಟ್ಟುಕೊಳ್ಳಲಾಗಿದೆ ಎಂದು ಅವರು ಹೇಳಿದರು.

ಸಭೆಯಲ್ಲಿ ಉನ್ನತ ಶಿಕ್ಷಣ ಪರಿಷತ್ತಿನ ಉಪಾಧ್ಯಕ್ಷ ಪ್ರೊ.ತಿಮ್ಮೇಗೌಡ, ಐಟಿಬಿಟಿ ಇಲಾಖೆ ಹೆಚ್ವುವರಿ ಮುಖ್ಯ ಕಾರ್ಯದರ್ಶಿ ರಮಣರೆಡ್ಡಿ, ಕೌಶಲ್ಯಾಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ್, ಐಟಿಬಿಟಿ ನಿರ್ದೇಶಕಿ ಮೀನಾ ನಾಗರಾಜ, ಉದ್ಯೋಗ ಮತ್ತು ತರಬೇತಿ ಇಲಾಖೆ ಆಯುಕ್ತೆ ಜ್ಯೋತಿ, ಕಿಯೋನಿಕ್ಸ್ ವ್ಯವಸ್ಥಾಪಕ ನಿರ್ದೇಶಕ ರವಿ ಡಿ.ಚನ್ನಣ್ಣನವರ್, ಕೆಇಎ ಆಡಳಿತಾಧಿಕಾರಿ ಶಿವಕುಮಾರ ಸೇರಿದಂತೆ ಇತರರು ಇದ್ದರು.

share
Next Story
X