ಬೆಂಗಳೂರು: ಕರ್ತವ್ಯದ ವೇಳೆ ಕುಸಿದು ಬಿದ್ದು ಇನ್ಸ್ಪೆಕ್ಟರ್ ಮೃತ್ಯು
ಬೆಂಗಳೂರು, ಡಿ.2: ಪೊಲೀಸ್ ಇನ್ಸ್ಪೆಕ್ಟರ್ ಒಬ್ಬರು ವಿಧಾನಸೌಧದ ಭದ್ರತಾ ಕರ್ತವ್ಯದ ವೇಳೆ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ವರದಿಯಾಗಿದೆ.
2009ನೇ ಬ್ಯಾಚ್ ಪಿಎಸ್ಐ ಆಗಿದ್ದ ಧನಂಜಯ್ ಮೃತ ಇನ್ಸ್ಪೆಕ್ಟರ್ ಎಂದು ತಿಳಿದು ಬಂದಿದೆ.
ಮೂಳೆ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಇನ್ಸ್ಪೆಕ್ಟರ್ ಧನಂಜಯ್, ಕಳೆದ ಒಂದು ವರ್ಷದಿಂದ ಕ್ಯಾನ್ಸರ್ಗೆ ಚಿಕಿತ್ಸೆ ಪಡೆಯುತ್ತಿದ್ದರೆನ್ನಲಾಗಿದೆ.
ಒಂದು ವಾರದ ಹಿಂದೆ ಕರ್ತವ್ಯಕ್ಕೆ ವಾಪಸ್ ಆಗಿದ್ದ ಅವರು ಇಂದು ಕರ್ತವ್ಯದ ವೇಳೆ ಕುಸಿದು ಬಿದ್ದಿದ್ದಾರೆ. ಕೂಡಲೇ ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಿ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೇ ಇನ್ಸ್ಪೆಕ್ಟರ್ ಧನಂಜಯ್ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಮೃತರು ಪತ್ನಿ,ಇಬ್ಬರು ಹೆಣ್ಣುಮಕ್ಕಳನ್ನು ಅಗಲಿದ್ದಾರೆ.
Next Story