-

ಹವಾಮಾನ ವೈಪರೀತ್ಯ ನಿರೋಧಕ ರಾಜ್ಯವಾಗಿ ಕರ್ನಾಟಕ: ವಿಶ್ವಬ್ಯಾಂಕ್ ನೊಂದಿಗೆ ಸಿಎಂ ಬೊಮ್ಮಾಯಿ ಚರ್ಚೆ

-

ಬೆಂಗಳೂರು, ಡಿ.5: ಕರ್ನಾಟಕ ರಾಜ್ಯವನ್ನು ಹವಾಮಾನ ವೈಪರೀತ್ಯ ನಿರೋಧಕವಾಗಿ ರೂಪಿಸುವ ಕುರಿತಂತೆ ವಿಶ್ವಬ್ಯಾಂಕ್‍ನ ಭಾರತದ ಕಂಟ್ರಿ ಡೈರೆಕ್ಟರ್ ಆಗಸ್ಟೆ ಟ್ಯಾನೊ ಕೊಮೆ ನೇತೃತ್ವದ ನಿಯೋಗದೊಂದಿಗೆ ಚರ್ಚಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಈ ನಿಟ್ಟಿನಲ್ಲಿ ಜಾಗತಿಕ ಮಟ್ಟದ ಪರಿಣಿತಿಯನ್ನು ಒದಗಿಸುವಲ್ಲಿ ವಿಶ್ವಬ್ಯಾಂಕ್‍ನ ಸಹಯೋಗವನ್ನು ಕೋರಿದರು. 

ಸೋಮವಾರ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಳೆದ ಒಂದೂವರೆ ದಶಕದಲ್ಲಿ ಮೊದಲ ಏಳೆಂಟು ವರ್ಷ ತೀವ್ರ ಬರ ಪರಿಸ್ಥಿತಿ ಎದುರಾದರೆ, ಕಳೆದ ನಾಲ್ಕೈದು ವರ್ಷಗಳಿಂದ ತೀವ್ರ ಪ್ರವಾಹ, ಭೂಕುಸಿತ, ಸಮುದ್ರ ಕೊರೆತದಂತಹ ಪರಿಸ್ಥಿತಿ ತಲೆದೋರಿದೆ. ಒಂದೇ ವರ್ಷ ಪ್ರವಾಹ ಹಾಗೂ ಬರ ಪರಿಸ್ಥಿತಿಯನ್ನು ಎದುರಿಸಿದ ದಾಖಲೆಗಳೂ ರಾಜ್ಯದಲ್ಲಿವೆ ಎಂದರು.

ಇದರಿಂದ ರಾಜ್ಯದಲ್ಲಿ ಬೆಳೆ, ಸಾರ್ವಜನಿಕ ಆಸ್ತಿಪಾಸ್ತಿಗೆ ತೀವ್ರ ನಷ್ಟವಾಗುವುದರೊಂದಿಗೆ ಜನಜೀವನವೇ ಅಸ್ತವ್ಯಸ್ತಗೊಳ್ಳುತ್ತಿದೆ. ಜೀವನೋಪಾಯಕ್ಕೆ ಅಡ್ಡಿಯುಂಟಾಗುತ್ತಿದೆ. ಇದಲ್ಲದೆ ಇತ್ತೀಚೆಗೆ ಬೆಂಗಳೂರು ನಗರದಲ್ಲಿ ಉಂಟಾದ ಪ್ರವಾಹ ಪರಿಸ್ಥಿತಿಯನ್ನು ರಾಜ್ಯ ಸರಕಾರ ಅತಿ ಗಂಭೀರವಾಗಿ ಪರಿಗಣಿಸಿದ್ದು, ಇದಕ್ಕೆ ಶಾಶ್ವತ ಪರಿಹಾರ ಹಾಗೂ ವಿಪತ್ತು ನಿರ್ವಹಣೆಗೆ ಸೂಕ್ತ ಪೂರ್ವ ತಯಾರಿಯನ್ನು ಮಾಡಿಕೊಳ್ಳುವ ವ್ಯವಸ್ಥೆ ರೂಪಿಸಲು ಉದ್ದೇಶಿಸಿದೆ ಎಂದು ಮುಖ್ಯಮಂತ್ರಿ ತಿಳಿಸಿದರು. 

ರಾಜ್ಯದಲ್ಲಿ ಬೆಂಗಳೂರು ನಗರ ಪ್ರವಾಹ ನಿರ್ವಹಣೆ, ಬರ ಪರಿಸ್ಥಿತಿ ನಿರ್ವಹಣೆ, ಕಡಲಕೊರೆತದ ನಿರ್ವಹಣೆ ಹಾಗೂ ವಿಪತ್ತಿನ ಅಪಾಯವನ್ನು ತಗ್ಗಿಸುವುದು ಹಾಗೂ ವಿಪತ್ತು ನಿರ್ವಹಣೆಯ ವಿಷಯಗಳಲ್ಲಿ ವಿಶ್ವಬ್ಯಾಂಕಿನ ಸಹಯೋಗವನ್ನು ನಿರೀಕ್ಷಿಸುತ್ತಿದ್ದು, ಅದರಲ್ಲೂ ಬೆಂಗಳೂರು ಪ್ರವಾಹ ನಿರ್ವಹಣೆ ಹಾಗೂ ಕಡಲ ಕೊರೆತದ ನಿರ್ವಹಣೆ ಕುರಿತು ಹೆಚ್ಚಿನ ಆದ್ಯತೆ ನೀಡುವಂತೆ ಅವರು ಮನವಿ ಮಾಡಿದರು.

ಯೋಜನೆಗೆ ಸಂಬಂಧಿಸಿದಂತೆ ತ್ವರಿತವಾಗಿ ಒಪ್ಪಂದ ಮಾಡಿಕೊಂಡು, ನಿಗದಿತ ಕಾಲಮಿತಿಯಲ್ಲಿ ಯೋಜನೆ ಜಾರಿಗೊಳಿಸಲು ಎಲ್ಲ ಸಹಕಾರ ನೀಡುವುದಾಗಿ ತಿಳಿಸಿದ ಮುಖ್ಯಮಂತ್ರಿ, ಸಮುದ್ರದಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ನಿವಾರಣೆಗೆ ವಿಶ್ವಬ್ಯಾಂಕಿನೊಂದಿಗೆ ಕೈಜೋಡಿಸುವ ಬಗ್ಗೆ ಈಗಾಗಲೇ ಆಯವ್ಯಯದಲ್ಲಿ ಘೋಷಿಸಲಾಗಿದ್ದು, ಕರ್ನಾಟಕವು ದೇಶದಲ್ಲಿಯೇ ಮೊದಲ ಬಾರಿಗೆ ಪರಿಸರ ಆಯವ್ಯಯ ಮಂಡಿಸಿದ ರಾಜ್ಯವಾಗಿದೆ. ಪರಿಸರ ನಾಶವನ್ನು ಅಂದಾಜು ಮಾಡಿ, ಅದನ್ನು ಭರ್ತಿ ಮಾಡುವ ಉದ್ದೇಶಕ್ಕೆ 100 ಕೋಟಿ ರೂ. ಅನುದಾನ ಒದಗಿಸಲಾಗಿದೆ ಎಂದು ವಿವರಿಸಿದರು.

ರಾಜ್ಯ ಸರಕಾರದ ಪರಿಸರ ಸ್ನೇಹಿ ಕ್ರಮಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದ ವಿಶ್ವಬ್ಯಾಂಕ್‍ನ ಭಾರತದ ಕಂಟ್ರಿ ಡೈರೆಕ್ಟರ್ ಆಗಸ್ಟೆ ಟ್ಯಾನೊ ಕೊಮೆ, ವಿಪತ್ತು ನಿರೋಧಕ ರಾಜ್ಯ ನಿರ್ಮಾಣ ಯೋಜನೆಯಲ್ಲಿ ವಿಶ್ವಬ್ಯಾಂಕ್ ಎಲ್ಲ ರೀತಿಯ ಸಹಕಾರ ನೀಡಲು ಸಿದ್ಧವಿದೆ. ವಿಪತ್ತು ನಿರ್ವಹಣೆಯ ಕುರಿತಾದ ಸಮಗ್ರ ಯೋಜನೆ ಇದಾಗಿದ್ದು, ಇದನ್ನು ಹಂತ ಹಂತವಾಗಿ ಅನುಷ್ಠಾನಗೊಳಿಸಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ರಾಜ್ಯದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಸಿಎಂ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಕಂದಾಯ ಇಲಾಖೆ (ವಿಪತ್ತು ನಿರ್ವಹಣೆ) ಪ್ರಧಾನ ಕಾರ್ಯದರ್ಶಿ ಟಿ.ಕೆ. ಅನಿಲ್ ಕುಮಾರ್, ಮುಖ್ಯಮಂತ್ರಿಯವರ ಕಾರ್ಯದರ್ಶಿ ಎಂ.ಎಸ್.ಶ್ರೀಕರ್, ರಾಜ್ಯ ವಿಪತ್ತು ನಿರ್ವಹಣಾ ಇಲಾಖೆ ಆಯುಕ್ತ ಮನೋಜ್ ರಾಜನ್ ಉಪಸ್ಥಿತರಿದ್ದರು.

 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of  Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
 

Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request. 

Help us delete comments that do not follow these guidelines by informing us (vbwebdesk@gmail.com). Let's work together to keep the conversation civil. 

www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು  www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು  ' ವಾರ್ತಾ ಭಾರತಿ' ಕಾದಿರಿಸಿದೆ. 

ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ  ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ.  ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.

ಇಂದು ಹೆಚ್ಚು ಓದಿದ್ದು


Back to Top