ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ 28 ಲಕ್ಷ ರೂ. ಮೌಲ್ಯದ ಚಿನ್ನದೊಂದಿಗೆ ಆರೋಪಿ ವಶಕ್ಕೆ
ಬೆಂಗಳೂರು, ಡಿ.31: ವಿದೇಶದಿಂದ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಪ್ರಯಾಣಿಕನನ್ನು ಇಲ್ಲಿನ ದೇವನಹಳ್ಳಿ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.
ಬಂಧಿತನಿಂದ ಸುಮಾರು 28,73,932 ರೂ.ಮೌಲ್ಯದ 532 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.
ಶುಕ್ರವಾರ ಮಾಲ್ಡೀವ್ಸ್ ನಿಂದ ವಿಮಾನದಲ್ಲಿ ದೇವನಹಳ್ಳಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಯಾಣಿಕನೋರ್ವ ಬಂದಿಳಿದಿದ್ದ. ಈ ವೇಳೆ ಪ್ರಯಾಣಿಕನ ವರ್ತನೆಯನ್ನು ಕಂಡು ಅನುಮಾನಗೊಂಡ ಕಸ್ಟಮ್ಸ್ ಅಧಿಕಾರಿಗಳು ಆತನನ್ನು ವಶಕ್ಕೆ ಪಡೆದು ತಪಾಸಣೆ ನಡೆಸಿದ್ದಾರೆ.
ಈ ವೇಳೆ ಪ್ರಯಾಣಿಕ ಬಳಿ ಅಕ್ರಮ ಚಿನ್ನ ಪತ್ತೆಯಾಗಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
Next Story