ವೆಲ್ಫೇರ್ ಪಾರ್ಟಿ ರಾಜ್ಯಾಧ್ಯಕ್ಷರಾಗಿ ತಾಹೇರ್ ಹುಸೇನ್ ಮರು ಆಯ್ಕೆ
ಬೆಂಗಳೂರು, ಜ.9: ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ(ಡಬ್ಲ್ಯೂಪಿಐ) ಪಕ್ಷದ ರಾಜ್ಯಾಧ್ಯಕ್ಷರಾಗಿ ಅಡ್ವೋಕೇಟ್ ತಾಹೇರ್ ಹುಸೇನ್ ಮರು ಆಯ್ಕೆಯಾಗಿದ್ದಾರೆ.
ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಸ್.ಕ್ಯೂ.ಆರ್.ಇಲ್ಯಾಸ್ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ರವಿವಾರ ನಡೆದ ರಾಜ್ಯ ಸಾಮಾನ್ಯ ಮಂಡಳಿ ಸಭೆಯಲ್ಲಿ ತಾಹೇರ್ ಹುಸೇನ್ ಅವರನ್ನು ರಾಜ್ಯಾಧ್ಯಕ್ಷರಾಗಿ ಎರಡನೇ ಅವಧಿಗೆ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಇವರ ಅಧಿಕಾರಾವಧಿ 2026ರವರೆಗೆ ಇರಲಿದೆ ಎಂದು ಪ್ರಕಟನೆ ತಿಳಿಸಿದೆ.
Next Story