ಮೆಟ್ರೋ ಪಿಲ್ಲರ್ ಬಿದ್ದು ತಾಯಿ, ಮಗು ಸಾವು ಪ್ರಕರಣ: BMRCL ಅಧಿಕಾರಿಗಳು, ಗುತ್ತಿಗೆದಾರರ ವಿರುದ್ಧ FIR

ಬೆಂಗಳೂರು, ಜ.10: ಮೆಟ್ರೋ ಪಿಲ್ಲರ್ ಬಿದ್ದು ತಾಯಿ ಮಗು ಮೃತಪಟ್ಟಿರುವ ಘಟನೆಯಲ್ಲಿ ಗೋವಿಂದಪುರ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ನಿರ್ಲಕ್ಷ್ಯ ಆರೋಪದಡಿ ಐಪಿಸಿ ಸೆಕ್ಷನ್ 337, 338, 427, 34 ಅನ್ವಯ ಪ್ರಕರಣ ದಾಖಲಾಗಿದೆ. ಸಂಬಂಧಪಟ್ಟ ಬಿಎಂಆರ್‍ಸಿಎಲ್ ಅಧಿಕಾರಿಗಳು, ಗುತ್ತಿಗೆದಾರರ ವಿರುದ್ಧ ಮೊಕದ್ದಮೆ ದಾಖಲಾಗಿದೆ ಎಂದು ತಿಳಿದುಬಂದಿದೆ.
20 ಲಕ್ಷ ಪರಿಹಾರ: ಘಟನಾ ಸ್ಥಳಕ್ಕೆ ಬಿಎಂಆರ್‍ಸಿಎಲ್ ನಿರ್ದೇಶಕ ಅಝುಂ ಪರ್ವೇಝ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತರ ಕುಟುಂಬಕ್ಕೆ 20 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಘೋಷಿಸಿದ್ದಾರೆ. ಅಲ್ಲದೆ, ಮುಖ್ಯ ಇಂಜಿನಿಯರ್ ಹಾಗೂ ಗುತ್ತಿಗೆದಾರನಿಗೆ ನೋಟಿಸ್ ನೀಡಿದ್ದೇನೆ ಎಂದು ಹೇಳಿದ್ದಾರೆ.
ಮೆಟ್ರೊ 2 ನೇ ಹಂತದ ಕಾಮಗಾರಿ ನಡೆಯುತ್ತಿದ್ದ ನಾಗವಾರ ಬಳಿ (ಹೆಣ್ಣೂರು ಕ್ರಾಸ್) ಮಂಗಳವಾರ ಬೆಳಗ್ಗೆ ಕಬ್ಬಿಣದ ಸರಳುಗಳ ಪಿಲ್ಲರ್ ಕುಸಿದು 23 ವರ್ಷದ ತೇಜಸ್ವಿನಿ ಮತ್ತು ಅವರ ಎರಡೂವರೆ ವರ್ಷದ ಕಂದಮ್ಮ ಮೃತಪಟ್ಟಿದ್ದಾರೆ.
Next Story





