Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕೇಂದ್ರ ಸೇವೆಗಳಿಗೆ ಕನ್ನಡಿಗರ ನೇಮಕಾತಿ...

ಕೇಂದ್ರ ಸೇವೆಗಳಿಗೆ ಕನ್ನಡಿಗರ ನೇಮಕಾತಿ ಹೆಚ್ಚಿಸಲು ತರಬೇತಿ: ಅಶ್ವತ್ಥನಾರಾಯಣ

ಕಾಲೇಜು ಶಿಕ್ಷಣ ಇಲಾಖೆ-‘ಸ್ಪರ್ಧಾ ಅರಿವು' ಒಡಂಬಡಿಕೆ

19 Jan 2023 10:55 PM IST
share
ಕೇಂದ್ರ ಸೇವೆಗಳಿಗೆ ಕನ್ನಡಿಗರ ನೇಮಕಾತಿ ಹೆಚ್ಚಿಸಲು ತರಬೇತಿ: ಅಶ್ವತ್ಥನಾರಾಯಣ
ಕಾಲೇಜು ಶಿಕ್ಷಣ ಇಲಾಖೆ-‘ಸ್ಪರ್ಧಾ ಅರಿವು' ಒಡಂಬಡಿಕೆ

ಬೆಂಗಳೂರು, ಜ. 19: ಬಿ.ಎ, ಬಿ.ಕಾಂ, ಬಿ.ಎಸ್ಸಿ, ಎಂಜಿನಿಯರಿಂಗ್ ಮತ್ತು ಡಿಪ್ಲೊಮಾ ಅಂತಿಮ ವರ್ಷದಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಉಚಿತ ತರಬೇತಿ, ಜಾಗೃತಿ ಮೂಡಿಸುವ ಉದ್ದೇಶದಿಂದ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಹಾಗೂ ‘ಸ್ಪರ್ಧಾ ಅರಿವು' ನಿಯತಕಾಲಿಕೆ ಒಡಂಬಡಿಕೆ ಮಾಡಿಕೊಂಡಿವೆ. 

ಗುರುವಾರ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ್ ಮತ್ತು ‘ಸ್ಪರ್ಧಾ ಅರಿವು' ಸಿಇಒ ಸತೀಶ ಗೌಡ ಅವರು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥನಾರಾಯಣ ಸಮ್ಮುಖದಲ್ಲಿ ಒಪ್ಪಂದಕ್ಕೆ ಸಹಿ ಹಾಕಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅಶ್ವತ್ಥ ನಾರಾಯಣ, ‘ಕೇಂದ್ರ ಸರಕಾರಿ ಸೇವೆಗಳಿಗೆ ನಮ್ಮ ಕರ್ನಾಟಕದಿಂದ ನೇಮಕವಾಗುವವರ ಸಂಖ್ಯೆ ಇನ್ನೂ ಹೆಚ್ಚಾಗಬೇಕು’ ಎಂದರು.

ಸ್ಟ್ಯಾಫ್ ಸೆಲೆಕ್ಷನ್ ಕಮಿಷನ್ ಮೂಲಕ ಸದ್ಯದಲ್ಲೇ 30 ಸಾವಿರ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಈ ಹುದ್ದೆಗಳಿಗೆ ಹಾಗೂ ಯುಪಿಎಸ್ಸಿ ನಡೆಸುವ ನೇಮಕಾತಿಗಳಿಗೆ ನಮ್ಮ ಕರ್ನಾಟಕದವರು ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆಯಾಗಬೇಕೆಂಬುದು ಈ ಒಡಂಬಡಿಕೆಯ ಉದ್ದೇಶ ಎಂದು ಅವರು ವಿವರಿಸಿದರು.

ಬಿಎ, ಬಿಕಾಂ, ಬಿಎಸ್ಸಿ, ಡಿಪ್ಲೊಮಾ ಮತ್ತು ಎಂಜಿನಿಯರಿಂಗ್ ಕೋರ್ಸ್ ಗಳ ಕೊನೆಯ ವರ್ಷದಲ್ಲಿರುವ ವಿದ್ಯಾರ್ಥಿಗಳಿಗೆ ಎಸ್‍ಎಸ್ಸಿ ಮೂಲಕ ವಿವಿಧ ಹುದ್ದೆಗಳಿಗೆ ನಡೆಯುವ ಪರೀಕ್ಷೆಗಳಿಗೆ ತರಬೇತಿ ಕೊಡಲಾಗುವುದು. ನೋಂದಣಿ ಮಾಡಿಸಿಕೊಳ್ಳುವ ಪ್ರತಿ ಅಭ್ಯರ್ಥಿಯು ಮೊಬೈಲ್ ಮೂಲಕ ಪ್ರತಿ ತಿಂಗಳು ಹೊಸ ಹಾಗೂ ಪರಿಷ್ಕøತ ಮಾಹಿತಿಗಳಿಂದ ಕೂಡಿದ ನಿಯತಕಾಲಿಕವನ್ನು ಅಧ್ಯಯನ ಮಾಡಬಹುದು ಎಂದು ಅಶ್ವತ್ಥ ನಾರಾಯಣ ಹೇಳಿದರು. 

ಕ್ಯುಆರ್ ಕೋಡ್ ಮೂಲಕ ಇದನ್ನು ನೋಡುವ ಅವಕಾಶವನ್ನೂ ಒದಗಿಸಲಾಗುತ್ತದೆ. ತಯಾರಿ ಭಾಗವಾಗಿ ವಾರಕ್ಕೊಮ್ಮೆ ಸ್ಟಡಿ ಪ್ಲಾನ್ ಸಿದ್ದಪಡಿಸುವ ಜೊತೆಗೆ ಪರೀಕ್ಷೆಯನ್ನೂ ನಡೆಸಲಾಗುವುದು. ಅಲ್ಲದೆ, ಶಿಕ್ಷಕರ ಮೂಲಕ ತರಬೇತಿಗೂ ವ್ಯವಸ್ಥೆ ಮಾಡಲಾಗುವುದು ಎಂದು ಅವರು ತಿಳಿಸಿದರು.

ಸರಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ಕೊಡಲಾಗಿದೆ. ಉನ್ನತ ಶಿಕ್ಷಣ ಇಲಾಖೆಯಲ್ಲಿ ಹೊಸದಾಗಿ ಐದು ಸಾವಿರ ಕಾಯಂ ಹುದ್ದೆಗಳ ನೇಮಕಾತಿಗೆ ಪ್ರಸ್ತಾವ ಸಲ್ಲಿಸಲಾಗುವುದು. ಇದರ ಜೊತೆಗೆ ಇನ್ನೂ ಅತಿಥಿ ಉಪನ್ಯಾಸಕರ ಸಂಖ್ಯೆ ಹೆಚ್ಚಾಗಲಿದೆ. ಅದಕ್ಕೆ ತಕ್ಕಂತೆ ಸರಕಾರಿ ಕಾಲೇಜುಗಳಲ್ಲಿನ ಪ್ರವೇಶಾತಿ ಸಂಖ್ಯೆಯನ್ನು ಈಗಿರುವ 5 ಲಕ್ಷದಿಂದ 10 ಲಕ್ಷಕ್ಕೆ ಹೆಚ್ಚಿಸುವ ಗುರಿ ಹೊಂದಬೇಕು ಎಂದು ಅಶ್ವತ್ಥ ನಾರಾಯಣ ಹೇಳಿದರು.

'ಸ್ಪರ್ಧಾ ಅರಿವು' ನಿರ್ದೇಶಕ ಗಿರೀಶ್, ಕಾಲೇಜು ಶಿಕ್ಷಣ ಇಲಾಖೆ ನಿರ್ದೇಶಕ ಡಾ.ಅಪ್ಪಾಜಿ ಗೌಡ, ತಾಂತ್ರಿಕ ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕ ಶ್ರೀಕಾಂತ್ ಇದ್ದರು. ಕಾಲೇಜು ಶಿಕ್ಷಣ ಇಲಾಖೆ ಹೆಚ್ಚುವರಿ ನಿರ್ದೇಶಕ ಹೆಬ್ಬಾರ್ ವಂದಿಸಿದರು.

share
Next Story
X