ಮೆಟ್ರೋ ಪಿಲ್ಲರ್ ದುರಂತ: ಸರಕಾರಕ್ಕೆ ಹೈಕೋರ್ಟ್ ನೋಟಿಸ್
ಬೆಂಗಳೂರು, ಫೆ.1: ನಾಗವಾರದ ಹೆಣ್ಣೂರು ಕ್ರಾಸ್ ಬಳಿ ಮೆಟ್ರೋ ಪಿಲ್ಲರ್ ನಿರ್ಮಾಣಕ್ಕಾಗಿ ಅಳವಡಿಸಿದ್ದ ಕಬ್ಬಿಣದ ಚೌಕಟ್ಟು ಕುಸಿದು ಬಿದ್ದು ತಾಯಿ ಮತ್ತು ಮಗು ಸಾವನ್ನಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರ ಮತ್ತು ಬಿಎಂಆರ್ಸಿಎಲ್ಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಘಟನೆ ಕುರಿತು ಮಾಧ್ಯಮಗಳಲ್ಲಿ ಪ್ರಕಟವಾಗಿರುವ ಸುದ್ದಿ ಪರಿಗಣಿಸಿ ಹೈಕೋರ್ಟ್ ಸ್ವಯಂ ಪ್ರೇರಿತವಾಗಿ ದಾಖಲಿಸಿಕೊಂಡಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ, ಉಚ್ಚನ್ಯಾಯಾಲಯದ ವಿಭಾಗೀಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು.
ವಿಚಾರಣೆ ನಡೆಸಿದ ಹೈಕೋರ್ಟ್, ಪ್ರತಿವಾದಿಗಳಾಗಿರುವ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ, ಬಿಎಂಆರ್ಸಿಎಲ್ ವ್ಯವಸ್ಥಾಪಕ ನಿರ್ದೇಶಕ, ಬಿಬಿಎಂಪಿ ಸೇರಿ ಎಲ್ಲ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿತು.
Next Story