Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. H3N2 ಹಾವಳಿ | ಆಸ್ಪತ್ರೆಗಳಲ್ಲಿ...

H3N2 ಹಾವಳಿ | ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುವ ಆರೋಗ್ಯ ಸಿಬ್ಬಂದಿಗೆ ಮಾಸ್ಕ್ ಕಡ್ಡಾಯ: ಸಚಿವ ಡಾ.ಸುಧಾಕರ್

ಹೊಸ ಸೋಂಕಿನ ಪರೀಕ್ಷೆಗೆ ಕಡಿಮೆ ದರ ನಿಗದಿ ಮಾಡಲು ಕ್ರಮ

6 March 2023 3:22 PM IST
share
H3N2 ಹಾವಳಿ | ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುವ ಆರೋಗ್ಯ ಸಿಬ್ಬಂದಿಗೆ ಮಾಸ್ಕ್ ಕಡ್ಡಾಯ: ಸಚಿವ ಡಾ.ಸುಧಾಕರ್
ಹೊಸ ಸೋಂಕಿನ ಪರೀಕ್ಷೆಗೆ ಕಡಿಮೆ ದರ ನಿಗದಿ ಮಾಡಲು ಕ್ರಮ

ಬೆಂಗಳೂರು, ಮಾ.6: H3N2 ವೈರಸ್‌ ಸೋಂಕುಗೆ ಸಂಬಂಧಿಸಿದಂತೆ ರಾಜ್ಯದಲ್ಲಿ ಆತಂಕದ ಸ್ಥಿತಿ ನಿರ್ಮಾಣವಾಗಿಲ್ಲ. ಎಲ್ಲಾ ಆಸ್ಪತ್ರೆಗಳ ಆರೋಗ್ಯ ಸಿಬ್ಬಂದಿ ಕಡ್ಡಾಯವಾಗಿ ಮಾಸ್ಕ್‌ ಧರಿಸಬೇಕೆಂದು ಸೂಚನೆ ನೀಡಿ ಆದೇಶ ಹೊರಡಿಸಲಾಗುವುದು. ಹಾಗೆಯೇ ಜನರು ಮುನ್ನೆಚ್ಚರಿಕೆ ವಹಿಸಲು ಮಾರ್ಗಸೂಚಿ ಬಿಡುಗಡೆ ಮಾಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದ್ದಾರೆ.

H3N2 ವೈರಸ್‌ ಹರಡುತ್ತಿರುವ ಹಿನ್ನೆಲೆಯಲ್ಲಿ, ತಾಂತ್ರಿಕ ಸಮಿತಿ ಹಾಗೂ ಹಿರಿಯ ಅಧಿಕಾರಿಗೊಳೊಂದಿಗೆ ಸಚಿವರು ಸಭೆ ನಡೆಸಿದ ಸಚಿವರು, ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದರು.

ಇನ್‌ಫ್ಲುಯೆಂಝಗೆ ಪ್ರತಿ ವರ್ಷ ಲಸಿಕೆ ನೀಡುತ್ತಿದ್ದು, ಇದನ್ನು ಎಲ್ಲ ಆರೋಗ್ಯ ಸಿಬ್ಬಂದಿ ಪಡೆಯಲು ಲಿಖಿತ ಸೂಚನೆ ನೀಡಲಾಗುವುದು. ಐಸಿಯುನಲ್ಲಿ ಕೆಲಸ ಮಾಡುವವರು ಸೇರಿದಂತೆ ಕೆಲ ನಿರ್ದಿಷ್ಟ ವೈದ್ಯರು, ಸಿಬ್ಬಂದಿಗೆ ಸರ್ಕಾರದಿಂದಲೇ ಲಸಿಕೆ ನೀಡಲಾಗುವುದು. 2019ರವರೆಗೆ ಈ ಲಸಿಕೆ ನೀಡಲಾಗುತ್ತಿತ್ತು. ಕೋವಿಡ್‌ ಬಂದ ಬಳಿಕ ನೀಡಿಲ್ಲ. ಈಗ ಮತ್ತೆ ಅದನ್ನು 31 ಜಿಲ್ಲೆಗಳಲ್ಲಿ ನೀಡಲಾಗುವುದು ಎಂದು ತಿಳಿಸಿದರು.

ಪ್ರತಿ ವಾರ 25 ಪರೀಕ್ಷೆ ಮಾಡಬೇಕೆಂದು ಕೇಂದ್ರ ಸರ್ಕಾರ ಗುರಿ ನೀಡಿದೆ. ಬೆಂಗಳೂರಿನ ವಿಕ್ಟೋರಿಯಾ ಹಾಗೂ ವಾಣಿ ವಿಲಾಸ ಆಸ್ಪತ್ರೆಗಳಲ್ಲಿ ಸಾರಿ ಹಾಗೂ ಐಎಲ್‌ಐ ಪ್ರಕರಣಗಳ ಪೈಕಿ 25 ಮಂದಿಗೆ ಈ ಪರೀಕ್ಷೆ ಮಾಡಿ ಯಾವ ಪ್ರಭೇದದ ವೈರಾಣು ಎಂದು ಪತ್ತೆ ಮಾಡಲಾಗುವುದು ಎಂದರು.

15 ವರ್ಷಕ್ಕಿಂತ ಕಡಿಮೆ ವಯೋಮಾನದ ಮಕ್ಕಳಲ್ಲಿ, 65 ವರ್ಷ ಮೇಲ್ಪಟ್ಟ ವೃದ್ಧರಿಗೆ ಈ ಸೋಂಕು ಕಂಡುಬರಬಹುದು. ಗರ್ಭಿಣಿಯರಿಗೂ ಸೋಂಕು ಬರುವ ಸಾಧ್ಯತೆ ಹೆಚ್ಚಿದೆ. ಶುಚಿತ್ವ, ಗುಂಪುಗೂಡುವುದನ್ನು ತಡೆಯುವುದು, ಕೈಗಳ ಸ್ವಚ್ಛತೆ ಮೊದಲಾದ ಕ್ರಮಗಳ ಮೂಲಕ ಸೋಂಕು ಹರಡುವುದನ್ನು ತಡೆಯಬಹುದು ಎಂದರು.

ಅನಗತ್ಯವಾಗಿ ಆ್ಯಂಟಿ ಬಯಾಟಿಕ್‌ ಬೇಡ

ಜನವರಿಯಿಂದ ಮಾರ್ಚ್‌ವರೆಗೆ ಎಚ್‌1ಎನ್‌1 ನ 20 ಪ್ರಕರಣಗಳು ಪತ್ತೆಯಾಗಿವೆ. ಎಚ್‌3ಎನ್‌2 ನ 26 ಪ್ರಕರಣ ಪತ್ತೆಯಾಗಿದೆ. ಇನ್‌ಫ್ಲುಯೆಂಝ ಬಿ 10, ಅಡಿನೋ 69 ಪ್ರಕರಣ ಕಂಡುಬಂದಿದೆ. ಅನೇಕರು ಆ್ಯಂಟಿ ಬಯಾಟಿಕ್‌ ಮಾತ್ರೆಗಳನ್ನು ಸೇವಿಸುತ್ತಿದ್ದಾರೆ. ವೈದ್ಯರ ಸಲಹೆ ಇಲ್ಲದೆ ಔಷಧಿ ಸೇವಿಸುವುದು, ಅನಗತ್ಯವಾಗಿ ಆ್ಯಂಟಿ ಬಯಾಟಿಕ್‌ ಸೇವಿಸುವುದು ಸರಿಯಲ್ಲ ಎಂದು ತಜ್ಞರು ಹೇಳಿದ್ದಾರೆ. ಇದಕ್ಕೆ ಸಿಂಪ್ಟಮೆಟಿಕ್‌ ಚಿಕಿತ್ಸೆ ನೀಡಲಾಗುತ್ತದೆ. ಅಗತ್ಯ ಔಷಧಿಗಳನ್ನು ದಾಸ್ತಾನು ಮಾಡಲಾಗಿದೆ. ಔಷಧಿಯ ಕೊರತೆ ಇಲ್ಲ ಎಂದು ತಿಳಿಸಿದರು.

ಬೇಸಿಗೆಯ ಆರಂಭಕ್ಕೆ ಮುನ್ನವೇ ಫೆಬ್ರವರಿಯಲ್ಲೇ ತಾಪಮಾನ ಹೆಚ್ಚಾಗಿದೆ. ಇದರಿಂದ ಸಮಸ್ಯೆ ಹೆಚ್ಚುತ್ತಿದೆ. ಪೂ. 11 ರಿಂದ ಅಪರಾಹ್ನ 3 ಗಂಟೆಯವರೆಗೆ ಬಿಸಿಲಲ್ಲಿ ಓಡಾಡುವುದು ತಪ್ಪಿಸಬೇಕು. ಕನಿಷ್ಠ 2-3 ಲೀಟರ್‌ ನೀರು, ಮಜ್ಜಿಗೆ, ಎಳನೀರು, ಶರಬತ್‌ ಕುಡಿಯುವುದೊಳಿತು. ದೇಹದಲ್ಲಿ ನೀರು ಕಡಿಮೆ ಆಗದಂತೆ ಎಚ್ಚರ ವಹಿಸಬೇಕು ಎಂದು ಸಲಹೆ ನೀಡಿದರು.

ಈ ಸೋಂಕು ಬಂದರೆ 2-5 ದಿನದೊಳಗೆ ನಿವಾರಣೆಯಾಗುತ್ತದೆ. ಕೋವಿಡ್‌ಗೊಳಗಾದವರಿಗೆ ಸೋಂಕು ಬಂದರೆ ಹೆಚ್ಚು ಕೆಮ್ಮು ಇರುತ್ತದೆ. ಬೆಂಗಳೂರಿನಲ್ಲಿ ಈ ಸೋಂಕಿನ ಎರಡು ಪ್ರಕರಣಗಳು ಕಂಡುಬಂದಿವೆ ಎಂದರು.

ದರ ನಿಯಂತ್ರಣಕ್ಕೆ ಸಮಿತಿ

ಹೊಸ ಸೋಂಕು ಪರೀಕ್ಷೆಯ ದರ ನಿಯಂತ್ರಣಕ್ಕೆ ಕಡಿವಾಣ ಹಾಕಲು ಸಮಿತಿ ರಚಿಸಲು ಸೂಚಿಸಲಾಗಿದೆ. ಕಡಿಮೆ ದರದಲ್ಲಿ ಪರೀಕ್ಷೆ ಮಾಡುವಂತೆ ಕ್ರಮ ವಹಿಸಲು ಸೂಚಿಸಲಾಗಿದೆ. ವರದಿ ಬಂದ ಬಳಿಕ ಪರೀಕ್ಷೆಗೆ ದರ ನಿಗದಿ ಮಾಡಲಾಗುವುದು ಎಂದು ತಿಳಿಸಿದರು.

share
Next Story
X