ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕ ಪ್ರಕಾಶ್ ರಾಠೋಡ್ ತಾಯಿ ನಿಧನ
ಬೆಂಗಳೂರು, ಮಾ. 19: ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕ ಪ್ರಕಾಶ್ ರಾಠೋಡ ಅವರ ತಾಯಿ ರವಿವಾರ ನಿಧನರಾಗಿದ್ದಾರೆ.
ಮಾಜಿ ಸಚಿವ ಮತ್ತು ಕೆಪಿಸಿಸಿ ಮಾಜಿ ಅಧ್ಯಕ್ಷ ಕೆ.ಟಿ.ರಾಠೋಡ ಅವರ ಧರ್ಮಪತ್ನಿಯಾದ ಆಶಾದೇವಿ(85) ದಂಪತಿಗೆ ಇಬ್ಬರು ಗಂಡು ಮಕ್ಕಳು ಮತ್ತು ಇಬ್ಬರು ಹೆಣ್ಣು ಮಕ್ಕಳು ಹಾಗೂ ಕುಟುಂಬವು ಸೇರಿದಂತೆ ಅಪಾರ ಸಂಖ್ಯೆಯ ಬಂಧು-ಮಿತ್ರರನ್ನು ಅಗಲಿದ್ದಾರೆ.
ಪ್ರಕಾಶ್ ರಾಥೋಡ್ ಅವರ ತಾಯಿ ಆಶಾದೇವಿ ರಾಥೋಡ್ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ಮೃತರ ಅಂತ್ಯಕ್ರಿಯೆಯನ್ನು ನಾಳೆ(ಮಾ.20) ಮಧ್ಯಾಹ್ನ 12ಗಂಟೆ ಸುಮಾರಿಗೆ ಇಲ್ಲಿನ ಹೆಬ್ಬಾಳ ಚಿತಾಗಾರದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
Next Story