Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ತ್ರಿಭಾಷಾ ಕವಿ ಪಂಪನಿಗೆ ಸಿಗಬೇಕಾದ...

ತ್ರಿಭಾಷಾ ಕವಿ ಪಂಪನಿಗೆ ಸಿಗಬೇಕಾದ ಸ್ಥಾನಮಾನ ಇನ್ನೂ ದೊರೆತಿಲ್ಲ: ಹಂಪ ನಾಗರಾಜಯ್ಯ

25 March 2023 9:52 PM IST
share
ತ್ರಿಭಾಷಾ ಕವಿ ಪಂಪನಿಗೆ ಸಿಗಬೇಕಾದ ಸ್ಥಾನಮಾನ ಇನ್ನೂ ದೊರೆತಿಲ್ಲ: ಹಂಪ ನಾಗರಾಜಯ್ಯ

ಬೆಂಗಳೂರು, ಮಾ. 25: ಪಂಪ ತ್ರಿಭಾಷಾ ಕವಿ ಎಂದೇ ಪ್ರಸಿದ್ಧಿ ಪಡೆದ ಪಂಪನಿಗೆ ಕನ್ನಡ ಸಾಹಿತ್ಯ ಲೋಕದಲ್ಲಿ ಸಿಗಬೇಕಾದ ಸ್ಥಾನಮಾನ ದೊರೆತ್ತಿಲ್ಲ. ಇದು ಎಲ್ಲರಿಗೂ ತಿಳಿದಿರುವ ವಿಚಾರವಾಗಿದೆ ಎಂದು ಸಾಹಿತಿ ಹಂಪ ನಾಗರಾಜಯ್ಯ ಬೇಸರ ವ್ಯಕ್ತಪಡಿಸಿದ್ದಾರೆ.

ಶನಿವಾರ ನಗರದ ಜೈನ ಭವನದಲ್ಲಿ ಕಮಲಾ ಹಂಪನಾ ಸಾಹಿತ್ಯ ವೇದಿಕೆ ಮತ್ತು ಕರ್ನಾಟಕ ಜೈನ ಅಸೋಸಿಯೇಷನ್ ವತಿಯಿಂದ ಆಯೋಜಿಸಿದ್ದ ‘ಅಕ್ಕರಗೊಟ್ಟಿಯ ಅಲಂಪಿನ ಇಂಪು ಚಂಪೂ ಕಬ್ಬಗಳ ಹಬ್ಬ’ದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದವರು. 

ಪಂಪ ಹಾಗೂ ಆತನ ತಮ್ಮ ಜಿನವಲ್ಲಭನ ಬಗ್ಗೆ ತಿಳಿದುಕೊಳ್ಳುದು ಬಹಳ ಇದೆ. ಪಂಪನ ದಕ್ಷಿಣಾತ್ಯ ಮಹಾಭಾರತದ ಪರಂಪರೆಯನ್ನು ತಿಳಿದುಕೊಂಡು ವಿಕ್ರಮಾರ್ಜುನ ಕಾವ್ಯವನ್ನು ಬರೆದಿರುವುದು. ಮಹಾಭಾರತದ ವ್ಯಾಪ್ತಿ ಬಹಳ ದೊಡ್ಡದು ಅವುಗಳನ್ನು ತಿಳಿಸುವ ಪ್ರಯತ್ನವನ್ನು ಪಂಪನು ಮಾಡಿದ್ದನು ಎಂದು ಅವರು ತಿಳಿಸಿದರು. 

ಸಾಹಿತಿ ಎಚ್.ಎಸ್.ಶಿವಪ್ರಕಾಶ್ ಮಾತಾನಾಡಿ, ಪ್ರಾಚೀನ ಕಾವ್ಯಗಳಿಗೆ ಹೆಗ್ಗಳಿಕೆ ಕೊಟ್ಟವನು ಪಂಪ ಎನ್ನುವುದರಲ್ಲಿ ಯಾವುದೇ ಅನುಮಾನವಿಲ್ಲ. ಧರ್ಮ ಮತ್ತು ಕಾವ್ಯದ ಬಗ್ಗೆ ಪಂಪನು ಬಹಳ ವಿಮರ್ಶತ್ಮಕವಾಗಿ ತಿಳಿಸಿದ್ದಾನೆ. ಪ್ರಾಚೀನ ಕಾವ್ಯಗಳಲ್ಲಿ ಸೃಜನಶೀಲತೆ ಮತ್ತು ಅನುವಾದ ಬಹಳ ತೆಳುವಾಗಿದೆ. ಅದೇ ಅನುವಾದಕ್ಕೆ ಆಧುನಿಕ ಸ್ಪರ್ಶ ನೀಡಲಾಗಿದೆ ಎಂದರು.

ವಿಮರ್ಶಕಿ ಎಂ.ಎಸ್.ಆಶಾದೇವಿ, ಪಂಪನ ಆದಿಪುರಾಣದ ಬಗ್ಗೆ ಬಹಳ ಚರ್ಚೆಗಳು ಆಗಿ ಹೋಗಿವೆ. ಆದಿಪುರಾಣ ‘ಆದಿಮ ಪುರಾಣ’ ಎನ್ನುವುದು ನನ್ನ ಅಭಿಪ್ರಾಯ. ಆದಿಪುರಾಣಕ್ಕೆ ಧರ್ಮದ ಕವಚವಿಲ್ಲದೆ ಅಸ್ತಿತ್ವ ಇದೆ ಎಂಬುದನ್ನು ನಾವು ಮೊದಲು ತಿಳಿದಿಕೊಳ್ಳಬೇಕಾದ ಅವಶ್ಯಕತೆ ಇದೆ’. ‘ಆದಿಪುರಾಣ ಎನ್ನುವುದು ಮನುಷ್ಯರ ಅವಸ್ಥೆಗಳನ್ನು ಕುರಿತ ಪುರಾಣವಾಗಿದೆ. ಪಂಪನು ಭೋಗದಲ್ಲಿ ಮತ್ತು ವೈರಾಗ್ಯದಲ್ಲಿ ಮನುಷ್ಯನ ಅವಸ್ಥೆಗಳ ಚಿತ್ರಣವನ್ನ ವರ್ಣಿಸುವ ಕೆಲಸವನ್ನು ಮಾಡಿದ್ದಾನೆ ಎಂದರು.

ಇದೇ ಸಂದರ್ಭದಲ್ಲಿ ಪ್ರೊ.ಸಿ.ಮಹಾದೇವಪ್ಪ ಅವರಿಗೆ ಗುರುವಂದನೆ ಕಾರ್ಯಕ್ರಮವು ನೆರವೇರಿತು. ಸಂಶೋಧಕ ಗುರುರಾಜ ಕರ್ಜಗಿ, ಪ್ರಾಧ್ಯಾಪಕಿ ವಿನಯಾ ಒಕ್ಕುಂದ, ಲೇಖಕ ಬಸವರಾಜ ಕಲ್ಗುಡಿ ಮತ್ತಿತರರು ಉಪಸ್ಥಿತರಿದ್ದರು. 

share
Next Story
X