Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಇಲಾಖೆಯನ್ನು ಕೇಸರಿಕರಣ ಮಾಡಲು...

ಇಲಾಖೆಯನ್ನು ಕೇಸರಿಕರಣ ಮಾಡಲು ಹೊರಟಿದ್ದೀರಾ?: ಪೊಲೀಸರಿಗೆ ಡಿಸಿಎಂ ಡಿಕೆಶಿ ತರಾಟೆ

''ಸಿದ್ದರಾಮಯ್ಯರನ್ನು ಹೊಡೆದು ಹಾಕಬೇಕು ಎಂದವರ ವಿರುದ್ಧ ಕೇಸ್ ಹಾಕಲಿಲ್ಲ ಯಾಕೆ ?''

23 May 2023 4:38 PM IST
share
ಇಲಾಖೆಯನ್ನು ಕೇಸರಿಕರಣ ಮಾಡಲು ಹೊರಟಿದ್ದೀರಾ?: ಪೊಲೀಸರಿಗೆ ಡಿಸಿಎಂ ಡಿಕೆಶಿ ತರಾಟೆ
''ಸಿದ್ದರಾಮಯ್ಯರನ್ನು ಹೊಡೆದು ಹಾಕಬೇಕು ಎಂದವರ ವಿರುದ್ಧ ಕೇಸ್ ಹಾಕಲಿಲ್ಲ ಯಾಕೆ ?''

ಬೆಂಗಳೂರು, ಮೇ 2; ಉನ್ನತ ಮಟ್ಟದ ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ಪೊಲೀಸ್ ಅಧಿಕಾರಿಗಳನ್ನು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತರಾಟೆ ತೆಗೆದುಕೊಂಡ ಘಟನೆ ಜರುಗಿತು. 

'ಪೊಲೀಸ್ ಇಲಾಖೆಯನ್ನು ಕೇಸರಿಕರಣ ಮಾಡಲು ಹೊರಟಿದ್ದೀರಾ ನೀವು?, ನಮ್ಮ ಸರ್ಕಾರದಲ್ಲಿ ಇದಕ್ಕೆ ಅವಕಾಶ ಕೊಡಲ್ಲ. ಮಂಗಳೂರು, ಬಿಜಾಪುರ, ಬಾಗಲಕೋಟೆಯಲ್ಲಿ ನೀವು ಹೇಗೆ ಕೇಸರಿ ಬಟ್ಟೆ ಹಾಕೊಂಡು ಇಲಾಖೆಗೆ ಅವಮಾನ ಮಾಡಿದ್ರಿ ಅಂತಾ ಗೊತ್ತಿದೆ. ಈ‌ ಸಭೆಗೂ ಕೇಸರಿ ಶಾಲು ಹಾಕಿಕೊಂಡು ಬರಬೇಕಾಗಿತ್ತು. ದೇಶದ ಬಗ್ಗೆ ಗೌರವ ಇದ್ದರೆ ರಾಷ್ಟ್ರ ಧ್ವಜ ಹಾಕೊಂಡು ಕೆಲಸ ಮಾಡಬೇಕಿತ್ತು. ನಮ್ಮ ಸರಕಾರದಲ್ಲಿ ಪೊಲೀಸ್ ಇಲಾಖೆಯನ್ನ ಕೇಸರಿಕರಣ ಮಾಡಲು ನಾವು ಬಿಡಲ್ಲ' ಎಂದು ಎಚ್ಚರಿಕೆ ನೀಡಿದರು. 

'PSI ಅಕ್ರಮದಲ್ಲಿ ಒಬ್ಬ ಎಡಿಜಿಪಿ omr ಪೇಪರ್ ತಿದ್ದುತ್ತಾರೆ ಅಂದರೆ ಇಲಾಖೆ ಎಷ್ಟು ಕೆಟ್ಟು ಹೋಗಿದೆ ನೋಡಿ, ಪ್ರೆಸ್ ಕಾನ್ಫರೆನ್ಸ್ ಮಾಡಿ ಪ್ರಕರಣ ಬಯಲಿಗೆ ತಂದ ಪ್ರಿಯಾಂಕ್ ಖರ್ಗೆ ಅವರಿಗೆ ಕಾಟ ಕೊಟ್ಟಿದ್ದೀರಾ?,  ಇಡೀ ದೇಶದಲ್ಲಿ ಕರ್ನಾಟಕ ಪೊಲೀಸ್ ಇಲಾಖೆಗೆ ಒಳ್ಳೆಯ ಹೆಸರಿತ್ತು. ಆ ಗೌರವ, ಘನತೆಯನ್ನ ನೀವು ಹಾಳು‌ ಮಾಡಿದ್ದೀರಿ' ಎಂದು ಸಭೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.

'ಜನ ನಮ್ಮ  ಸರಕಾರದಿಂದ ಬಹುದೊಡ್ಡ ಬದಲಾವಣೆಯನ್ನು ನಿರೀಕ್ಷೆ ಮಾಡಿದ್ದಾರೆ. ಅದು ಪೊಲೀಸ್ ಇಲಾಖೆಯಿಂದಲೇ ಶುರು ಆಗಬೇಕು. ಈ ಸರಕಾರದಿಂದ ಬದಲಾವಣೆ ಸಂದೇಶ ಜನರಿಗೆ ಹೋಗಬೇಕು. ನಿಮ್ಮಿಂದ ನಮಗೆ ನಯಾಪೈಸೆ ಹಣ ಬೇಕಿಲ್ಲ. ನೀವು ಯಾರಿಗೂ ಹಣ ಕೊಡೋದು ಬೇಡ. ಜನ ನರಳದಂತೆ ಉತ್ತಮವಾಗಿ ಕೆಲಸ ಮಾಡಿದರೆ ಸಾಕು. ನಿಮ್ಮ ಹಿಂದಿನ ವರ್ತನೆ ನಮ್ಮ ಸರ್ಕಾರದಲ್ಲಿ ನಡೆಯಲ್ಲ' ಎಂದು ಡಿ.ಕೆ.ಶಿವಕುಮಾರ್ ಎಚ್ಚರಿಸಿದರು. 

ಹಿಂದೆ ಪೇ ಸಿಎಂ ಅಭಿಯಾನ ಮಾಡಿದಾಗ ನನ್ನ ಮತ್ತು ಸಿದ್ದರಾಮಯ್ಯರ ಜೊತೆ ಹೇಗೆ ನಡೆದುಕೊಂಡಿದ್ದೀರಾ ಗೊತ್ತಿದೆ. ನಮ್ಮ ಮೇಲೆ ಕೇಸ್ ಹಾಕಿದ್ರಿ. ನಮ್ಮ ಕಾರ್ಯಕರ್ತರ ಮೇಲೆ ಸುಳ್ಳು, ಸುಳ್ಳು ಸಾವಿರಾರು ಕೇಸ್ ಹಾಕಿದ್ರಿ. ನನ್ನನ್ನು, ಸಿದ್ದರಾಮಯ್ಯ ಅವರನ್ನೇ ಬಿಡದ ನೀವು ಇನ್ನು ಸಾಮಾನ್ಯ ಜನರನ್ನು ಬಿಡ್ತೀರಾ? ಎಂದು ಪ್ರಶ್ನೆ ಮಾಡಿದರು. 

'ಟಿಪ್ಪು ಸುಲ್ತಾನ್ ಅವರನ್ನು ಹೊಡೆದು ಹಾಕಿದಂತೆ ಸಿದ್ದರಾಮಯ್ಯ ಅವರನ್ನು ಹೊಡೆದು ಹಾಕಬೇಕು ಎಂದು ಕೊಲೆ ಮಾಡಲು ಕರೆ ನೀಡಿದ, ಪ್ರೇರಣೆ ನೀಡಿದವರ ವಿರುದ್ಧ ಯಾಕೆ ಕೇಸ್ ಹಾಕಲಿಲ್ಲ ನೀವು?, ಅದು ಕ್ರೈಂ ಅಲ್ವಾ? ನೀವು ಏನೇನೂ ಮಾಡಿದ್ದೀರಾ ಅಂತ ನಮ್ಮ ಬಳಿ ಸಾಕ್ಷಿಗಳು ಇವೆ. ನಾವು ಎಲ್ಲವನ್ನೂ ವಾಚ್ ಮಾಡಿದ್ದೇವೆ' ಎಂದು ಹೇಳಿದರು. 

''ನೀವು ಬದಲಾಗಬೇಕು, ನಿಮ್ಮ ವರ್ತನೆ ಬದಲಾಗಬೇಕು. ಇಲ್ಲ ಅಂದರೆ ನಿಮ್ಮನ್ನೇ ಬದಲಾವಣೆ ಮಾಡಬೇಕಾಗುತ್ತದೆ. ನಾವು ದ್ವೇಷ ಸಾಧಿಸೋದಿಲ್ಲ. ಅದರಲ್ಲಿ ನಮಗೆ ನಂಬಿಕೆ ಇಲ್ಲ. ನೀವು ಬದಲಾಗಿ, ಹಳೆಯದು ಬಿಡಿ. ಹೊಸದಾಗಿ ಕೆಲಸ ಶುರು ಮಾಡಿ. ಜನರ ನೆಮ್ಮದಿ ಕಾಪಾಡಿ. ಪ್ರಾಮಾಣಿಕವಾಗಿ ಕೆಲಸ ಮಾಡಿದ್ರೆ ನಾವು ನಿಮ್ಮ ಜೊತೆ ಇರುತ್ತೇವೆ. ಈ ಸರ್ಕಾರದ ಮೇಲೆ ಜನ ನಂಬಿಕೆ ಇಟ್ಟಿದ್ದಾರೆ. ಅದನ್ನ ಉಳಿಸಿಕೊಳ್ಳಿ. ಈ ಸರಕಾರದಿಂದ ಬದಲಾವಣೆ ಆಗುತ್ತಿದೆ ಎಂಬ ಸಂದೇಶವನ್ನು ನಿಮ್ಮ ಕೆಲಸದ ಮೂಲಕ ಜನರಿಗೆ ನೀಡಿ''

 - ಡಿ.ಕೆ.ಶಿವಕುಮಾರ್ ,ಉಪ ಮುಖ್ಯಮಂತ್ರಿ 

share
Next Story
X