ಮುಖ್ಯಮಂತ್ರಿಗಳು ಯಾವುದೇ ಖಾತೆ ಕೊಟ್ಟರೂ ನಿಭಾಯಿಸುತ್ತೇನೆ: ಎಚ್.ಸಿ.ಮಹದೇವಪ್ಪ
''ಕಾಂಗ್ರೆಸ್ನಲ್ಲಿ ಯಾವುದೇ ಬಣ ಇಲ್ಲ''
''ಕಾಂಗ್ರೆಸ್ನಲ್ಲಿ ಯಾವುದೇ ಬಣ ಇಲ್ಲ''
ಬೆಂಗಳೂರು: 'ಮುಖ್ಯಮಂತ್ರಿಗಳು ನನಗೆ ಯಾವುದೇ ಖಾತೆ ಕೊಟ್ಟರೂ ನಿಭಾಯಿಸುತ್ತೇನೆ' ಎಂದು ನಿಯೋಜಿತ ಸಚಿವ, ತಿ.ನರಸೀಪುರ ಶಾಸಕ ಡಾ. ಎಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ನಾನು ಯಾವತ್ತೂ ಸಚಿವ ಸ್ಥಾನ, ಇಂತಹದ್ದೇ ಖಾತೆ ಬೇಕು ಎಂದಿಲ್ಲ. ಪಕ್ಷ ಜವಾಬ್ದಾರಿ ಕೊಟ್ಟಾಗ ಸಮರ್ಥವಾಗಿ ನಿಭಾಯಿಸಿದ್ದೇನೆ' ಎಂದು ಹೇಳಿದರು.
''ಕಾಂಗ್ರೆಸ್ನಲ್ಲಿ ಯಾವುದೇ ಬಣ ಇಲ್ಲ''
'ಕಾಂಗ್ರೆಸ್ನಲ್ಲಿ ಯಾವುದೇ ಬಣ ಇಲ್ಲ, ಇರೋದು ಕಾಂಗ್ರೆಸ್ ಬಣ. ನಮ್ಮ ಕ್ಷೇತ್ರದ ಜನರು, ಕಾರ್ಯಕರ್ತರಿಗೆ ಋಣಿಯಾಗಿದ್ದೇನೆ. ಕ್ಷೇತ್ರದ ಜತೆಗೆ ರಾಜ್ಯದ ಅಭಿವೃದ್ಧಿಗೆ ಗಮನಕೊಡುತ್ತೇನೆ' ಎಂದು ಎಚ್.ಸಿ.ಮಹದೇವಪ್ಪ ತಿಳಿಸಿದರು.
Next Story