ವಿದ್ಯಾರ್ಥಿವೇತನ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಬೆಂಗಳೂರು, ಸೆ.30: ಪ್ರೀ ಮೆಟ್ರಿಕ್, ಪೋಸ್ಟ್ ಮೆಟ್ರಿಕ್ ಹಾಗೂ ಮೆರಿಟ್ ಕಮ್ ಮಿನ್ಸ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸುವ ಅವಧಿಯನ್ನು ಅ.31ರವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ರಾಜ್ಯ ಅಲ್ಪಸಂಖ್ಯಾತರ ನಿರ್ದೇಶನಾಲಯದ ನಿರ್ದೇಶಕ ಅಕ್ರಮ್ಪಾಷ ತಿಳಿಸಿದ್ದಾರೆ.
ಈ ಹಿಂದೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಸೆ.30 ಅಂತಿಮ ದಿನವಾಗಿತ್ತು. ಆದರೆ, ಪೋಷಕರು ಹಾಗೂ ಸಂಘ ಸಂಸ್ಥೆಗಳ ಮನವಿಯ ಹಿನ್ನೆಲೆಯಲ್ಲಿ ಅರ್ಜಿ ಸಲ್ಲಿಸುವ ಅವಧಿಯನ್ನು ಅ.31ರವರೆಗೆ ವಿಸ್ತರಣೆ ಮಾಡಲಾಗಿದೆ.
Next Story