ಮೇ 30ರಂದು ಸಿಇಟಿ ಫಲಿತಾಂಶ ಪ್ರಕಟ
ಬೆಂಗಳೂರು, ಮೇ 26: ಸಿಬಿಎಸ್ಇ ಹಾಗೂ ಐಬಿಎಸ್ಇ ಫಲಿತಾಂಶ ಪ್ರಕಟವಾಗುವುದು ತಡವಾದ ಹಿನ್ನೆಲೆಯಲ್ಲಿ 2017ನೆ ಸಾಲಿನ ಸಿಇಟಿ ಫಲಿತಾಂಶ ಮೇ 30ರಂದು ಪ್ರಕಟವಾಗಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.
ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ ಹಾಗೂ ಐಬಿಎಸ್ಇ ಮಾನ್ಯತೆ ಹೊಂದಿರುವ ಕಾಲೇಜುಗಳಲ್ಲಿನ ದ್ವಿತೀಯ ಪಿಯು ಫಲಿತಾಂಶ ಪ್ರಕಟ ವಿಳಂಬವಾಗುವ ಕಾರಣ ಸಿಇಟಿ ಫಲಿತಾಂಶವನ್ನು ಮುಂದೂಡುವ ಅನಿವಾರ್ಯತೆ ಉಂಟಾಗಿತ್ತು. ಮೇ 27ರಂದು ಸಿಇಟಿ ಫಲಿತಾಂಶ ಪ್ರಕಟಿಸಲು ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಆದರೆ ಇದೀಗ ಅನಿವಾರ್ಯ ಕಾರಣಗಳಿಂದಾಗಿ ಮೇ 30ಕ್ಕೆ ಫಲಿತಾಂಶ ಪ್ರಕಟಗೊಳ್ಳಲಿದೆ ಎಂದು ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.
Next Story