ಕುಮಾರಸ್ವಾಮಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕೃತ
ಜಂತಕಲ್ ಮೈನಿಂಗ್ ಪ್ರಕರಣ:
ಬೆಂಗಳೂರು, ಜೂ.13: ಹತ್ತು ವರ್ಷಗಳ ಹಳೆಯ ಜಂತಕಲ್ ಮೈನಿಂಗ್ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಎಸ್ಐಟಿ ವಿಶೇಷ ನ್ಯಾಯಾಲಯ ಮಂಗಳವಾರ ತಿರಸ್ಕರಿಸಿದೆ.
ಈ ಬೆಳವಣಿಗೆಯ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಬಂಧನ ಭೀತಿ ಎದುರಿಸುತ್ತಿದ್ದಾರೆ.
ಜಂತಕಲ್ ಮೈನಿಂಗ್ ಪ್ರಕರಣದ ತನಿಖೆ ಪ್ರಗತಿಯಲ್ಲಿರುವ ಹಿನ್ನೆಲೆಯಲ್ಲಿ ಕುಮಾರ ಸ್ವಾಮಿಗೆ ನಿರೀಕ್ಷಣಾ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ಎಸ್ಐಟಿ ವಿಶೇಷ ನ್ಯಾಯಾಲಯ ತನ್ನ ತೀರ್ಪಿನಲ್ಲಿ ಸ್ಪಷ್ಟಪಡಿಸಿದೆ.
Next Story