25 ಸಾವಿರ ದಿನಗೂಲಿ ಕಾರ್ಮಿಕರಿಗೆ ಆರ್ಥಿಕ ಸಹಾಯ ನೀಡಲು ಮುಂದೆ ಬಂದ ಸಲ್ಮಾನ್ ಖಾನ್
ಕೊರೋನ ಲಾಕ್ ಡೌನ್
ಹೊಸದಿಲ್ಲಿ: ಫೆಡರೇಶನ್ ಆಫ್ ವೆಸ್ಟರ್ನ್ ಇಂಡಿಯಾ ಸಿನಿ ಎಂಪ್ಲೋಯೀಸ್ (ಎಫ್ ಡಬ್ಲ್ಯುಐಸಿಇ) ನ 25 ಸಾವಿರ ದಿನಗೂಲಿ ಕಾರ್ಮಿಕರಿಗೆ ಆರ್ಥಿಕ ಸಹಾಯ ನೀಡಲು ಬಾಲಿವುಡ್ ನಟ ಸಲ್ಮಾನ್ ಖಾನ್ ಮುಂದೆ ಬಂದಿದ್ದಾರೆ.
ಸಲ್ಮಾನ್ ಖಾನ್ ರ ಬೀಯಿಂಗ್ ಹ್ಯೂಮನ್ ಫೌಂಡೇಶನ್ ನೇರವಾಗಿ ಈ ಮೊತ್ತವನ್ನು ಕಾರ್ಮಿಕರ ಖಾತೆಗೆ ಜಮಾ ಮಾಡಲಿದೆ ಎಂದು ತಿಳಿದುಬಂದಿದೆ. ದಿನಗೂಲಿ ಕಾರ್ಮಿಕರ ಹೆಸರು ಮತ್ತು ಬ್ಯಾಂಕ್ ಖಾತೆಯ ಮಾಹಿತಿಯನ್ನು ಸಲ್ಮಾನ್ ಖಾನ್ ಕೇಳಿದ್ದಾರೆ ಎಂದು ಎಫ್ ಡಬ್ಲ್ಯುಐಸಿಇ ಅಧ್ಯಕ್ಷ ಬಿ.ಎನ್. ತಿವಾರಿ ತಿಳಿಸಿದ್ದಾರೆ.
Next Story