ಸಿಹಿ ಸುದ್ದಿಯ ಕುರಿತು ನಿಮ್ಮೆಲ್ಲರ ಊಹೆ 'ಸರಿಯಾಗಿದೆ' ಎಂದ ನಟಿ ರಮ್ಯಾ
ಬೆಂಗಳೂರು: ಎಲ್ಲರಿಗೂ ಗೌರಿ ಗಣೇಶ ಹಬ್ಬದ ಶುಭಾಶಯಗಳು.'ಸಿಹಿ ಸುದ್ದಿಯ ಕುರಿತು ನಿಮ್ಮೆಲ್ಲರ ಊಹೆ ಸರಿಯಾಗಿದೆ. ಹೌದು, ನಾನು ಮತ್ತೆ ಚಿತ್ರರಂಗಕ್ಕೆ ಹಿಂತಿರುಗುತ್ತಿದ್ದೇನೆ. ಆದರೆ ಈ ಬಾರಿ ನನ್ನ ನಿರ್ಮಾಣ ಸಂಸ್ಥೆ ಆಪಲ್ ಬಾಕ್ಸ್ ಸ್ಟಡಿಯೋಸ್'ನ ಮೂಲಕ ನಿರ್ಮಾಪಕಿಯಾಗಲಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.
ಏನಿದು ಆಪಲ್ ಬಾಕ್ಸ್? ಅದೊಂದು ಸಾಧಾರಣವಾದ, ಆದರೆ ಅಷ್ಟೇ ಉಪಯುಕ್ತವಾದ, ಪುಟ್ಟ ಮರದ ಪೆಟ್ಟಿಗೆ. ನನ್ನ ಚಿತ್ರರಂಗದ ಪಯಣದುದ್ದಕ್ಕೂ ನಿರಂತರವಾಗಿ ಆಪಲ್ ಬಾಕ್ಸ್ ಜೊತೆಗಿದೆ. ಸೆಟ್ ನಲ್ಲಿ ಕೂರಲು ಕುರ್ಚಿಗಳಿಲ್ಲದೇ ಇದ್ದಾಗ ಅಥವಾ ಕ್ಯಾಮರಾದ, ಇಲ್ಲವೇ ನಟರ ಎತ್ತರ ಹೆಚ್ಚಿಸಬೇಕಾದಾಗ ಈ ಆಪಲ್ ಬಾಕ್ಸ್ ನೆರವಿಗೆ ಬಂದಿದೆ - ಈ ಪೆಟ್ಟಿಗೆಯ ಸರಳತೆ ನನಗೆ ಸದಾ ಸ್ಪೂರ್ತಿಯಾಗಿ ನನ್ನನ್ನು ಪ್ರೇರೇಪಿಸಿದೆ.
ಪ್ರಸ್ತುತ, ಆಪಲ್ ಬಾಕ್ಸ್ ಸಂಸ್ಥೆ ಎರಡು ಚಿತ್ರಗಳನ್ನು ನಿರ್ಮಿಸಲು ಸಜ್ಜಾಗಿದೆ ಎಂದು ಹೇಳುವಲ್ಲಿ ನನಗೆ ಸಂತಸವಿದೆ. ಈ ಎರಡೂ ಚಿತ್ರಗಳು ಕೆ.ಆರ್.ಜಿ ಸಂಸ್ಥೆಯ ವಿತರಣೆಯ ಮೂಲಕ ಚಿತ್ರಮಂದಿರಗಳಲ್ಲಿ ತೆರೆ ಕಾಣಲಿವೆ. ಅದರ ಜೊತೆಯಲ್ಲೇ ಒ.ಟಿ.ಟಿ ಪ್ಲಾಟ್ ಫಾರಂಗಳಿಗಾಗಿ ಸಿನಿಮಾ ಹಾಗು ವೆಬ್ ಸೀರೀಸ್ ನಿರ್ಮಾಣ ಮಾಡಲು ಆಪಲ್ ಬಾಕ್ಸ್ ಸ್ಟಡಿಯೋಸ್ ಸಿದ್ಧವಾಗುತ್ತಿದೆ. ಈ ಬಗ್ಗೆ ಮತ್ತಷ್ಟು ಹೊಸ ವಿವರಗಳನ್ನು ಆಪಲ್ ಬಾಕ್ಸ್ನ ಸಾಮಾಜಿಕ ಜಾಲತಾಣಗಳಲ್ಲಿ ನಿರೀಕ್ಷಿಸಿ ಎಂದು ಟ್ವೀಟ್ ನಲ್ಲಿ ತಿಳಿಸಿದ್ದಾರೆ.
ನನ್ನೆಲ್ಲಾ ಪ್ರಯತ್ನಗಳಲ್ಲೂ ನಿರಂತರವಾಗಿ ಜೊತೆಗಿರುವ ನನ್ನ ಕುಟುಂಬ, ಸ್ನೇಹಿತರು, ಹಿತೈಷಿಗಳು, ಸಿನಿಮಾವರ್ಗದವರು ಮತ್ತು ಎಲ್ಲಕ್ಕಿಂತಲೂ ಹೆಚ್ಚಾಗಿ ನನ್ನ ಪ್ರೀತಿಯ ಅಭಿಮಾನಿಗಳಿಗೆ ಹೃತೂರ್ವಕ ವಂದನೆಗಳು, ನಿಮ್ಮೆಲ್ಲರ ಸಹಕಾರ ಮತ್ತು ಪ್ರೋತ್ಸಾಹ ಬೆಲೆ ಕಟ್ಟಲಾಗದ್ದು. ಇದರ ಜೊತೆಗೆ ವಿಜಯ ಕಿರಗಂದೂರ್, ಜಯಣ್ಣ, ಯೋಗಿ ಜಿ ರಾಜ್ ಮತ್ತು ಕಾರ್ತಿಕ್ ಗೌಡ ಇವರಿಗೂ ವಿಶೇಷ ಧನ್ಯವಾದಗಳು.
ಹೊಸ ಆರಂಭದತ್ತ ಹೆಜ್ಜೆ ಇಡುತ್ತಾ ಕೃತಜ್ಞತೆಗಳೊಂದಿಗೆ ರಮ್ಯಾ
Happy Ganesha Habba
— Divya Spandana/Ramya (@divyaspandana) August 31, 2022
Here’s to new beginnings@StudiosApplebox #AppleBoxStudios pic.twitter.com/or7qx6e6EB
Here it is!! #AppleBoxStudios https://t.co/GgozNnEsoa
— Divya Spandana/Ramya (@divyaspandana) August 31, 2022