'ಪಠಾಣ್' ಬೆಂಬಲಕ್ಕೆ ನಿಂತ ದಕ್ಷಿಣದ ತಾರೆಯರು: ಬಾಯ್ಕಾಟ್ ಬಾಲಿವುಡ್ ಎಂದವರಿಗೆ ತೀವ್ರ ಮುಜುಗರ
-

Photo: Pathaan/Twitter
ಮುಂಬೈ: ಶಾರುಖ್ ಖಾನ್ ಅಭಿನಯದ 'ಪಠಾಣ್' ಚಿತ್ರಕ್ಕೆ ದಕ್ಷಿಣ ಭಾರತೀಯ ಚಿತ್ರರಂಗದ ತಾರೆಯರು ಬೆಂಬಲ ಸೂಚಿಸಿದ್ದಾರೆ. ಬಲಪಂಥೀಯ ಹಿಂದುತ್ವವಾದಿಗಳಿಂದ ಪಠಾಣ್ ಬಹಿಷ್ಕಾರಕ್ಕೆ ಅಭಿಯಾನ ನಡೆಯುತ್ತಿರುವ ನಡುವೆ ದಕ್ಷಿಣದ ತಾರೆಯರು ಶಾರುಖ್ ಬೆನ್ನಿಗೆ ನಿಂತಿದ್ದಾರೆ.
ಅದರಲ್ಲೂ, ದಕ್ಷಿಣ ಭಾರತೀಯ ಚಿತ್ರಗಳನ್ನು ಮುನ್ನೆಲೆಗೆ ತಂದು ಬಾಲಿವುಡ್ ಚಿತ್ರಗಳನ್ನು ಬಹಿಷ್ಕರಿಸಬೇಕು ಎಂದು ಟ್ವಿಟರ್ ಅಭಿಯಾನ ನಡೆಸುತ್ತಿರುವವರಿಗೆ ಇದು ನುಂಗಲಾರದ ತುಪ್ಪವಾಗಿದೆ.
ಬಾಹುಬಲಿ, ಆರ್‌ಆರ್‌ಆರ್ ಮೊದಲಾದ ಚಿತ್ರಗಳ ಮೂಲಕ ಭಾರತೀಯ ಸಿನಿಪ್ರೇಮಿಗಳ ಗಮನ ಸೆಳೆದಿರುವ ಸ್ಟಾರ್ ನಿರ್ದೇಶಕ ಎಸ್ ಎಸ್ ರಾಜಮೌಳಿ ಶಾರುಖ್ ಬೆಂಬಲಕ್ಕೆ ಬಹಿರಂಗವಾಗಿ ನಿಂತಿದ್ದು, ಶಾರುಖ್ ರನ್ನು 'ಕಿಂಗ್' ಎಂದು ಕರೆಯುವ ಮೂಲಕ ತಮ್ಮ ಪ್ರೀತಿಯನ್ನು ವ್ಯಕ್ತಪಡಿಸಿದ್ದಾರೆ.
"(ಪಠಾಣ್) ಚಿತ್ರದ ಟ್ರೇಲರ್ ಅದ್ಭುತವಾಗಿದೆ. ರಾಜ ಮರಳಿ ಬರುತ್ತಿದ್ದಾರೆ. ಪಠಾಣ್ ತಂಡದ ಎಲ್ಲರಿಗೂ ಒಳ್ಳೆಯದಾಗಲಿ.." ಎಂದು ರಾಜಮೌಳಿ ಟ್ವೀಟ್ ಮಾಡಿದ್ದಾರೆ.
ಮೆಗಾ ಪವರ್ ಸ್ಟಾರ್ ರಾಮ್ ಚರಣ್ ಶಾರುಖ್ ಖಾನ್ ಚಿತ್ರಕ್ಕೆ ಬೆಂಬಲ ಸೂಚಿಸಿದ್ದಾರೆ.
"#ಪಠಾಣ್ ಅವರ ಇಡೀ ತಂಡಕ್ಕೆ ಶುಭ ಹಾರೈಸುತ್ತೇನೆ! ಶಾರುಖ್ ಸರ್ ಹಿಂದೆಂದೂ ಕಾಣದಂತಹ ಆಕ್ಷನ್ ಸೀಕ್ವೆನ್ಸ್‌ಗಳಲ್ಲಿ ನಿಮ್ಮನ್ನು ನೋಡಲು ತುಂಬಾ ಸಂತೋಷವಾಗುತ್ತಿದೆ!" ಎಂದು ರಾಮ್ ಚರಣ್ ಟ್ವೀಟ್ ಮಾಡಿದ್ದಾರೆ.
ತಮಿಳು ಚಿತ್ರರಂಗದ ಜನಪ್ರಿಯ ನಟ ದಳಪತಿ ವಿಜಯ್ ಕೂಡಾ ಪಠಾಣ್ ಚಿತ್ರಕ್ಕೆ ಶುಭ ಹಾರೈಸಿದ್ದಾರೆ.
Wishing the whole team of #Pathaan all the very best!@iamsrk Sir looking fwd to seeing you in action sequences like never before! #PathaanTrailerhttps://t.co/63G1CC4R20 @deepikapadukone | @TheJohnAbraham | #SiddharthAnand | @yrf pic.twitter.com/MTQBfYUfjg
— Ram Charan (@AlwaysRamCharan) January 10, 2023
The trailer looks fab
— rajamouli ss (@ssrajamouli) January 10, 2023
The King returns!!!
Lots of @iamsrk . All the best to the entire team of Pathaan... https://t.co/TvtVhTIshk
Wishing @iamsrk sir and the team all the best for #Pathaan
— Vijay (@actorvijay) January 10, 2023
Here is the trailer https://t.co/LLPfa6LR3r#PathaanTrailer
All hail the king !!! Cannot wait https://t.co/CuFRAknMqw
— Dulquer Salmaan (@dulQuer) January 10, 2023
South Stars are supporting #Pathaan!
— Wazihul Hasan Azad (@Wazi_says) January 13, 2023
Le Gobartards rn:
"Mera Gaan Jal Raha Hai..." pic.twitter.com/PB0OHrdh3Q
‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request.
Help us delete comments that do not follow these guidelines by informing us (vbwebdesk@gmail.com). Let's work together to keep the conversation civil.
www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು ' ವಾರ್ತಾ ಭಾರತಿ' ಕಾದಿರಿಸಿದೆ.
ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ. ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.