ದ.ಕ.ಜಿಲ್ಲೆ: ಶನಿವಾರ 792 ಮಂದಿಗೆ ಕೋವಿಡ್ ಸೋಂಕು ದೃಢ
ಸಾಂದರ್ಭಿಕ ಚಿತ್ರ (PTI)
ಮಂಗಳೂರು: ದ.ಕ.ಜಿಲ್ಲೆಯಲ್ಲಿ ಶನಿವಾರ 792 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. 335 ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಪಾಸಿಟಿವ್ ದರ ಶೇ.7.10 ದಾಖಲಾಗಿದೆ.ಜಿಲ್ಲೆಯಲ್ಲಿ ಈವರೆಗೆ 1,20,975 ಪಾಸಿಟಿವ್ ಪ್ರಕರಣ ದಾಖಲಾಗಿದೆ.
ಸೋಂಕಿತರ ಪೈಕಿ ಒಟ್ಟು 1,15,822 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. 1,706 ಮಂದಿ ಕೋವಿಡ್ಗೆ ಬಲಿಯಾಗಿದ್ದಾರೆ. ಸದ್ಯ 3,447 ಸಕ್ರಿಯ ಪ್ರಕರಣವಿದೆ.
ಕೋವಿಡ್ ನಿಯಮ ಉಲ್ಲಂಘಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ 93,192 ಪ್ರಕರಣ ದಾಖಲಿಸಿ, 1,12,80,680 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಪ್ರಕಟನೆ ತಿಳಿಸಿದೆ.
Next Story