ದ.ಕ.ಜಿಲ್ಲೆ: 490 ಮಂದಿಗೆ ಕೋವಿಡ್ ಪಾಸಿಟಿವ್; ಮೂವರು ಬಲಿ
ಮಂಗಳೂರು, ಜ.17: ದ.ಕ.ಜಿಲ್ಲೆಯಲ್ಲಿ ಸೋಮವಾರ 490 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಮೂವರು ಬಲಿಯಾಗಿದ್ದಾರೆ. 317 ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಪಾಸಿಟಿವ್ ದರ ಶೇ.5.84 ದಾಖಲಾಗಿದೆ.
ಜಿಲ್ಲೆಯಲ್ಲಿ ಈವರೆಗೆ 1,22,247 ಪಾಸಿಟಿವ್ ಪ್ರಕರಣ ದಾಖಲಾಗಿದೆ. ಸೋಂಕಿತರ ಪೈಕಿ ಒಟ್ಟು 1,16,355 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. 1,711 ಮಂದಿ ಕೋವಿಡ್ಗೆ ಬಲಿಯಾಗಿದ್ದಾರೆ. ಸದ್ಯ 4,181 ಸಕ್ರಿಯ ಪ್ರಕರಣವಿದೆ.
ಕೋವಿಡ್ ನಿಯಮ ಉಲ್ಲಂಘಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ 93,641ಪ್ರಕರಣ ದಾಖಲಿಸಿ, 1,13,39,530 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಪ್ರಕಟನೆ ತಿಳಿಸಿದೆ.
Next Story