ಕಾರ್ಕಳ : ಕಾರು ಢಿಕ್ಕಿ ; ಆಟೋ ಚಾಲಕ ಸ್ಥಳದಲ್ಲೇ ಮೃತ್ಯು
ಕಾರ್ಕಳ, ಜ.26: ಕಾರೊಂದು ರಿಕ್ಷಾಕ್ಕೆ ಢಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಚಾಲಕ ಮೃತಪಟ್ಟು ಮತ್ತೊರ್ವ ಗಂಭೀರವಾಗಿ ಗಾಯಗೊಂಡ ಘಟನೆ ಬುಧವಾರ ಬೆಳಗ್ಗೆ ಮಿಯಾರು ಚರ್ಚ್ ಸಮೀಪ ನಡೆದಿದೆ.
ಮೃತರನ್ನು ಅಟೋ ರಿಕ್ಷಾ ಚಾಲಕ ಚಂದ್ರಶೇಖರ ಮಡಿವಾಳ (54) ಎಂದು ಗುರುತಿಸಲಾಗಿದೆ. ರಿಕ್ಷಾದಲ್ಲಿದ್ದ ಪ್ರಯಾಣಿಕ ದಿವಾಕರ (52) ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಾರ್ಕಳ ಕಡೆಯಿಂದ ಬಜಗೋಳಿ ಕಡೆಗೆ ಹೋಗುತ್ತಿದ್ದ ರಿಕ್ಷಾಗೆ ಬಜಗೋಳಿ ಕಡೆಯಿಂದ ಕಾರ್ಕಳ ಕಡೆಗೆ ಬಂದ ಕಾರು ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ರಿಕ್ಷಾ ಮಗುಚಿ ಬಿದ್ದು, ರಸ್ತೆಗೆ ಎಸೆಯಲ್ಪಟ್ಟ ರಿಕ್ಷಾ ಚಾಲಕ ಚಂದ್ರಶೇಖರ ಗಂಭೀರ ಗಾಯಗೊಂಡು ಕಾರ್ಕಳ ಸರಕಾರಿ ಆಸ್ಪತ್ರೆಗೆ ಸಾಗಿಸುವಾಗ ದಾರಿಯಲ್ಲಿ ಮೃತಪಟ್ಟರು ಎಂದು ತಿಳಿದುಬಂದಿದೆ. ಅಪಘಾತದಿಂದ ಎರಡೂ ವಾಹನಗಳು ಸಂಪೂರ್ಣ ಜಖಂಗೊಂಡಿವೆ.
ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story