Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಫೆ.19ರಿಂದ ದ.ಕ. ಜಿಲ್ಲೆಯ ವಿವಿಧ...

ಫೆ.19ರಿಂದ ದ.ಕ. ಜಿಲ್ಲೆಯ ವಿವಿಧ ಇಲಾಖೆಗಳ ಕಡತ ವಿಲೇ ಅಭಿಯಾನ: ಸಚಿವ ಸುನಿಲ್ ಕುಮಾರ್‌

ವಾರ್ತಾಭಾರತಿವಾರ್ತಾಭಾರತಿ5 Feb 2022 5:30 PM IST
share
ಫೆ.19ರಿಂದ ದ.ಕ. ಜಿಲ್ಲೆಯ ವಿವಿಧ ಇಲಾಖೆಗಳ ಕಡತ ವಿಲೇ ಅಭಿಯಾನ: ಸಚಿವ ಸುನಿಲ್ ಕುಮಾರ್‌

ಮಂಗಳೂರು, ಫೆ.5: ದ.ಕ. ಜಿಲ್ಲೆಯ ವಿವಿಧ ಇಲಾಖೆಗಳಲ್ಲಿ ಕಡತ ವಿಲೇ ಆಗದೆ ಬಾಕಿ ಆಗಿರುವ ಬಗ್ಗೆ ನನ್ನ ಗಮನಕ್ಕೆ ಬಂದಿದ್ದು, ಫೆ. 19ರಿಂದ 28ರವರೆಗೆ ಕಡತ ವಿಲೇ ಅಭಿಯಾನವನ್ನು ನಡೆಸಲಾಗುವುದು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.

ದ.ಕ. ಜಿಲ್ಲಾ ಉಸ್ತುವಾರಿ ಸಚಿವಾರದ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಇಂದು ಪ್ರೆಸ್‌ಕ್ಲಬ್‌ನಲ್ಲಿ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಹಮ್ಮಿಕೊಳ್ಳಲಾದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ಅಭಿಯಾನ ಗ್ರಾಮ ಪಂಚಾಯತ್‌ನಿಂದ ಹಿಡಿದು ಜಿಲ್ಲಾ ಮಟ್ಟದ ಕಚೇರಿಯವರೆಗೆ ನಡೆಯಲಿದೆ. ಈಗಾಗಲೇ ಗ್ರಾಪಂ ಅಧಿಕಾರಿಗಳಿಂದ ಜಿಲ್ಲಾಧಿಕಾರಿವರೆಗೂ ಸೂಚನೆ ನೀಡಲಾಗಿದೆ. ಈವರೆಗೆ ಕಡತ ವಿಲೇ ಮಾಡದೆ ಇರಿಸಿಕೊಂಡ ಬಗ್ಗೆ ಚರ್ಚೆ ಮಾಡಲಾಗದು. ಆದರೆ ಮುಂದೆ ಕಡತ ವಿಲೇ ಆಗದೆ ಯಾವ ಅಧಿಕಾರಿಯೂ ತನ್ನಲ್ಲಿ ಕಡತ ಇರಿಸಿಕೊಳ್ಳದಂತೆ ಕ್ರಮ ವಹಿಸಲಾಗುವುದು ಎಂದು ಅವರು ಹೇಳಿದರು.

ಸಂವಾದ ಕಾರ್ಯಕ್ರಮದಲ್ಲಿ ಶಾಸಕ ವೇದವ್ಯಾಸ ಕಾಮತ್, ಮೇಯರ್ ಪ್ರೇಮಾನಂದ ಶೆಟ್ಟಿ, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದ್ರೆ ಉಪಸ್ಥಿತರಿದ್ದರು.

ಫೆ. 11ರಂದು ಕೆಡಿಪಿ ಸಭೆ

ದ.ಕ. ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯನ್ನು ಫೆ. 11ರಂದು ನಡೆಸಲಾಗುವುದು. ಈ ಬಗ್ಗೆ ಜಿಲ್ಲಾ ಮಟ್ಟದ ಎಲ್ಲಾ ಶಾಸಕರ ಜತೆ ಚರ್ಚಿಸಿ ಜಿಲ್ಲೆಯಲ್ಲಿ ಆಗಬೇಕಾಗಿರುವ ಅಭಿವೃದ್ದಿ ಕಾರ್ಯಗಳ ಬಗ್ಗೆ ಮಾಹಿತಿ ಪಡೆಯಲಾಗುವುದು ಎಂದರು.

2004ರಲ್ಲಿ 27ರ ಹರೆಯದಲ್ಲಿ ಶಾಸಕನಾಗಿ ಆಯ್ಕೆಯಾದಾಗ ಕಿರಿಯ ಶಾಸಕನಾಗಿದ್ದು, ಇದೀಗ ಸಚಿವ ಸಂಪುಟದಲ್ಲಿ ಕಿರಿಯ ಸಚಿವ ಎಂಬ ಗೌರವ ದೊರಕಿದೆ. ಪಕ್ಷ ಅವಕಾಶ ನೀಡಿದ್ದು, ಕಾರ್ಯಕರ್ತರ ಪರಿಶ್ರಮ ಇದಕ್ಕೆ ಕಾರಣ. ಅವರ ಧ್ವನಿಯಾಗಿ ಕಾರ್ಯಕ್ರಮ ರೂಪಿಸಿಕೊಂಡು ಮುಂದುವರಿಯುವದಾಗಿ ಸಚಿವ ಸುನಿಲ್ ಕುಮಾರ್ ಅಭಿಪ್ರಾಯಿಸಿದರು.

ಮರಳಿನ ಸಮಸ್ಯೆ ನಿವಾರಣೆ

ಅಕ್ರಮ ಸಾಗಾಟ, ದುಪ್ಪಟ್ಟು ಬೆಲೆಗೆ ಮಾರಾಟ, ಇಲಾಖೆಗಳ ನಡುವೆ ಸಮನ್ವಯದ ಕೊರತೆ ಮೊದಲಾದ ಮರಳಿನ ಕುರಿತಾದ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಸಚಿವ ಸುನಿಲ್ ಕುಮಾರ್, ನನಗೆ ಸಮಯ ಕೊಡಿ ಎಲ್ಲ ಸರಿಮಾಡುತ್ತೇನೆ ಎಂದರು.

ದ.ಕ.ಜಿಲ್ಲೆಯಲ್ಲಿ ಮರಳು ಪೂರೆಕೆಗೆ ಸಂಬಂಧಿಸಿ ಸಮಸ್ಯೆ ಇದೆ. ಜನರ ನಿರೀಕ್ಷೆಗೆ ತಕ್ಕಂತೆ ಸರಬರಾಜು ಸಾಧ್ಯವಾಗುತ್ತಿಲ್ಲ ಎಂಬ ಬಗ್ಗೆ ಅರಿವಿದೆ. ಇದಕ್ಕೆ ಹಸಿರು ನ್ಯಾಯಾಧೀಕರಣ, ನ್ಯಾಯಾಲಯದ ಸಮಸ್ಯೆಯೂ ಇದೆ. ಎಲ್ಲಾ ಸಮಸ್ಯೆಗಳನ್ನು ಪರಿಶೀಲಿಸಿ ಸೂಕ್ತ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಸಚಿವರು ಹೇಳಿದರು.

ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ಇಂದಾಜೆ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿತೇಂದ್ರ ಕುಂದೇಶ್ವರ ಕಾರ್ಯಕ್ರಮ ನಿರೂಪಿಸಿದರು.

ಸಂವಾದಕ್ಕೆ ಮೊದಲು ಇಂದು ನಿಧನರಾದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಆತ್ಮಕ್ಕೆ ಶಾಂತಿ ಕೋರಲಾಯಿತು.

ತುಳು ಭಾಷೆಗೆ ಆದ್ಯತೆ ನೀಡಲು ಬದ್ಧ

ತುಳು ಅಧಿಕೃತ ಭಾಷೆಯಾಗಿ ಘೋಷಿಸುವ ನಿಟ್ಟಿನಲ್ಲಿ ಸಿದ್ಧತೆ ಮಾಡಲಾಗಿದೆ. ಸದ್ಯ ಈ ಬಗೆಗಿನ ಪ್ರಸ್ತಾವನೆ ಕಾನೂನು ಇಲಾಖೆಯಲ್ಲಿದ್ದು, ಮುಖ್ಯಮಂತ್ರಿ ಹಾಗೂ ಕಾನೂನು ಸಚಿವರ ಜತೆ ಮಾತನಾಡಿ ಶೀಘ್ರವೇ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಚಿವ ಸುನಿಲ್ ಕುಮಾರ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X