ದ.ಕ. ಜಿಲ್ಲೆಯಲ್ಲಿ ಗುರುವಾರ ಕೋವಿಡ್ಗೆ ಓರ್ವ ಬಲಿ
ಸಾಂದರ್ಭಿಕ ಚಿತ್ರ (PTI)
ಮಂಗಳೂರು,ಮಾ.24:ದ.ಕ. ಜಿಲ್ಲೆಯಲ್ಲಿ ಗುರುವಾರ ಕೋವಿಡ್ಗೆ ಒಬ್ಬರು ಬಲಿಯಾಗಿದ್ದಾರೆ. ಇದರೊಂದಿಗೆ ಈವರೆಗೆ ಕೋವಿಡ್ಗೆ ಬಲಿಯಾದವರ ಸಂಖ್ಯೆ 1850ಕ್ಕೇರಿದೆ.
ಗುರುವಾರ ನಾಲ್ಕು ಮಂದಿಯಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡಿದ್ದು, ಎಂಟು ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.
ಜಿಲ್ಲೆಯಲ್ಲಿ ಈವರೆಗೆ 1,35,480 ಪಾಸಿಟಿವ್ ಪ್ರಕರಣ ದಾಖಲಾಗಿದೆ. ಸೋಂಕಿತರ ಪೈಕಿ ಒಟ್ಟು 1,33,619 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಸದ್ಯ 11 ಸಕ್ರಿಯ ಪ್ರಕರಣವಿದೆ. ಕೋವಿಡ್ ಪಾಸಿಟಿವಿಟಿ ದರ ಶೇ.0.34 ದಾಖಲಾಗಿದೆ.
ಕೋವಿಡ್ ನಿಯಮ ಉಲ್ಲಂಘಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ 96,198 ಪ್ರಕರಣ ದಾಖಲಿಸಿ 1,16,04,480 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಪ್ರಕಟನೆ ತಿಳಿಸಿದೆ.
Next Story