ಸುಬ್ರಹ್ಮಣ್ಯ : ರಸ್ತೆ ಅಪಘಾತ; ನಿವೃತ್ತ ಎಎಸ್ಐ ಮೃತ್ಯು
ಸುಬ್ರಹ್ಮಣ್ಯ : ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ನಿವೃತ್ತ ಎಎಸ್ಐ ಓರ್ವರು ಮೃತಪಟ್ಟ ಘಟನೆ ಸುಬ್ರಹ್ಮಣ್ಯದ ವಲ್ಲೀಶ ಸಭಾಭವನದ ಬಳಿ ರವಿವಾರ ನಡೆದಿದೆ.
ಮೃತರನ್ನು ಕುಲ್ಕುಂದ ನಿವಾಸಿ ನಿವೃತ್ತ ಅಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್ ಎ.ಪಿ. ಗೌಡ ಎಂದು ತಿಳಿದುಬಂದಿದೆ.
ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಕಾರು ನಡುವೆ ಢಿಕ್ಕಿ ಉಂಟಾಗಿ ಈ ಅಪಘಾತ ಸಂಭವಿಸಿದೆ. ಮೃತದೇಹವನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರದ ಶವಾಗಾರದಲ್ಲಿ ಇರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Next Story