ಮೂಡುಬಿದಿರೆ: ಬೈಕ್- ಸ್ಕೂಟರ್ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟ ಘಟನೆ ಗಂಟಾಲ್ ಕಟ್ಟೆ ಯಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ.
ವಾಲ್ಪಾಡಿಯ ಕೂಲಿ ಕಾರ್ಮಿಕರಾದ ರಮೇಶ್ ಸ್ಥಳದಲ್ಲೇ ಮೃತಪಟ್ಟವರು ಎಂದು ತಿಳಿದುಬಂದಿದೆ.
ಈ ಬಗ್ಗೆ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದುಬರಬೇಕಿದೆ.