ಉಪ್ಪಿನಂಗಡಿ: ಮೇ 28ರಂದು ಮುಕ್ರಿ ಕುಟುಂಬಸ್ಥರ ಸಮ್ಮಿಲನ | Vartha Bharati- ವಾರ್ತಾ ಭಾರತಿ

--

ಉಪ್ಪಿನಂಗಡಿ: ಮೇ 28ರಂದು ಮುಕ್ರಿ ಕುಟುಂಬಸ್ಥರ ಸಮ್ಮಿಲನ

ಉಪ್ಪಿನಂಗಡಿ: ಹದಿನೆಂಟನೇ ಶತಮಾನದಲ್ಲಿ ಉಪ್ಪಿನಂಗಡಿಗೆ ಆಗಮಿಸಿದ ಮುಕ್ರಿ ಮನೆತನದ ಮಂದಿಯನ್ನು ಒಗ್ಗೂಡಿಸುವ "ಮುಕ್ರಿ ಕುಟುಂಬಸ್ಥರ ಸಮ್ಮಿಲನ" ಮೇ 28ರಂದು ಉಪ್ಪಿನಂಗಡಿಯ ಎಚ್.ಎಂ. ಅಡಿಟೋರಿಯಂನಲ್ಲಿ ನಡೆಯಲಿದೆ ಎಂದು ಮುಕ್ರಿ ಫ್ಯಾಮಿಲಿ ಟ್ರಸ್ಟ್ ಅಧ್ಯಕ್ಷ ಸುಹೈಲ್ ಉಪ್ಪಿನಂಗಡಿ ತಿಳಿಸಿದರು. 

ಅವರು ಉಪ್ಪಿನಂಗಡಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಬೆಳಗ್ಗಿನಿಂದ ಸಂಜೆಯ ತನಕ ಕಾರ್ಯಕ್ರಮ ನಡೆಯಲಿದ್ದು, ಸಂಜೆ ಸಮಾರೋಪ ಸಮಾರಂಭ ನಡೆಯಲಿದೆ. ಬೆಳಗ್ಗೆ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ರಾಷ್ಟ್ರ ಪ್ರಶಸ್ತಿ ವಿಜೇತ ಶಿಕ್ಷಕ ಯಾಕೂಬ್ ಕೊಯ್ಯೂರು ಅವರಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಮುಕ್ರಿ ಕುಟುಂಬ ಸದಸ್ಯರುಗಳ ಜೀವನ, ಸಮಾಜಮುಖಿ ಸೇವೆಗಳ ಪರಿಚಯವನ್ನು ಒಳಗೊಂಡಂತೆ ಸಮಗ್ರ ಮಾಹಿತಿಯನ್ನು ಒಳಗೊಂಡಿರುವ ಸಂಚಿಕೆಯನ್ನು ತರಲಾಗಿದ್ದು, ಇದರ ಬಿಡುಗಡೆ ಕಾರ್ಯಕ್ರಮ ನಡೆಲಿದೆ. ಮುಕ್ರಿ ಕುಟುಂಬ ಸದಸ್ಯರಗಳ ಬರಹ, ಚಿತ್ರಕಲೆ ಪ್ರದರ್ಶನ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಇರುತ್ತದೆ. ಸಂಜೆ ಸಮಾರೋಪ ಸಮಾರಂಭ ನಡೆಯಲಿದ್ದು, ಹಿರಿಯರ ಗುರುತಿಸುವಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಟ್ರಸ್ಟ್ ಕಾರ್ಯದರ್ಶಿ ಜಲೀಲ್ ಮುಕ್ರಿ ಮಾಹಿತಿ ನೀಡಿ, ಮುಕ್ರಿ ಕುಟುಂಬ ಸಮ್ಮಿಳನ ಇದು 3ನೇ ಒಗ್ಗೂಡುವಿಕೆ ಕಾರ್ಯಕ್ರಮವಾಗಿದ್ದು, ಇದು ಕೇವಲ ಕಾರ್ಯಕ್ರಮವೊಂದಕ್ಕೆ ಸೀಮಿತವಾಗಿರದೆ, ಇದರ ಅಡಿಯಲ್ಲಿ ಕೋವಿಡ್-19 ಸಂದರ್ಭದಲ್ಲಿ ಹಲವು ಸಮಾಜಮುಖಿ ಯೋಜನೆಗಳನ್ನು ಹಾಕಿಕೊಂಡು ಸಂಕಷ್ಟದಲ್ಲಿರುವವರಿಗೆ ಸಹಾಯ, ಸಹಕಾರ ನೀಡಿದೆ. ಅದಾಗ್ಯೂ ಬಡವರ ಮನೆ ನಿರ್ಮಾಣ, ಮದುವೆ ಮೊದಲಾದ ಕಾರ್ಯಕ್ರಮಗಳಿಗೆ ಕೈಜೋಡಿಸುತ್ತಿದ್ದು, ಟ್ರಸ್ಟ್ ವತಿಯಿಂದ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚು ಒತ್ತು ಕೊಡುವ ಕೆಲಸಗಳನ್ನು ಮಾಡಿಕೊಂಡು ಬರುತ್ತಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಮುಕ್ರಿ ಫ್ಯಾಮಿಲಿ ಟ್ರಸ್ಟ್ ಖಜಾಂಚಿ ಶಮೀಮ್ ಇಬ್ರಾಹಿಂ, ಉಪಾಧ್ಯಕ್ಷ ಸಿದ್ದಿಕ್ ನೀರಾಜೆ ಉಪಸ್ಥಿತರಿದ್ದರು. 

 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of  Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
 

Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request. 

Help us delete comments that do not follow these guidelines by informing us (vbwebdesk@gmail.com). Let's work together to keep the conversation civil. 

www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು  www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು  ' ವಾರ್ತಾ ಭಾರತಿ' ಕಾದಿರಿಸಿದೆ. 

ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ  ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ.  ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.

Back to Top