ಉಪ್ಪಿನಂಗಡಿ; ಬಾಲಕಿಯ ಅತ್ಯಾಚಾರ ಆರೋಪ: ಪ್ರಕರಣ ದಾಖಲು
ಉಪ್ಪಿನಂಗಡಿ : ಶಾಲೆಗೆ ಹೋಗುತ್ತಿದ್ದ ಬಾಲಕಿಯನ್ನು ಕಾರಿನಲ್ಲಿ ಶಾಲೆಗೆ ಬಿಡುವ ಆಸೆ ತೋರಿಸಿ, ಲಾಡ್ಜ್ ಗೆ ಕರೆದೊಯ್ದು ಅತ್ಯಾಚಾರ ಮಾಡಿರುವುದಾಗಿ ಆರೋಪಿಸಿ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳ್ತಂಗಡಿ ತಾಲೂಕಿನ ಬಾಲಕಿಯನ್ನು ನೆರೆಮನೆಯ ಯವಕ ಮೇ 30ರಂದು ಶಾಲೆಗೆ ಕರೆದುಕೊಂಡು ಹೋಗುವುದಾಗಿ ತಿಳಿಸಿ ಕಾರಿನಲ್ಲಿ ಉಪ್ಪಿನಂಗಡಿಯ ಲಾಡ್ಜ್ ಗೆ ಕರೆದೊಯ್ದು ಅತ್ಯಾಚಾರ ನಡೆಸಿದ್ದಾನೆ ಎನ್ನಲಾಗಿದ್ದು, ಬಳಿಕ ಇಂದು ಬಾಲಕಿ ಮನೆಯಿಂದ ಹೊರಟು ಶಾಲೆಯತ್ತ ನಡೆದುಕೊಂಡು ಹೋಗುತ್ತಿದ್ದಾಗ, ಆರೋಪಿ ಬಲವಂತವಾಗಿ ಕಾರಿನಲ್ಲಿ ಕೂರಿಸಿ ಉಪ್ಪಿನಂಗಡಿಯ ಲಾಡ್ಜ್ ಗೆ ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿ, ಈ ವಿಚಾರವನ್ನು ಯಾರಿಗಾದರು ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆಯೊಡ್ಡಿದ್ದಾನೆ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.
ಉಪ್ಪಿನಂಗಡಿ ಪೊಲೀಸರು ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಿಸಿ, ತನಿಖೆ ನಡೆಸುತ್ತಿದ್ದಾರೆ.
Next Story