ಸುಳ್ಯ: ಮಗುವಿನೊಂದಿಗೆ ಬಾವಿಗೆ ಹಾರಿದ ಮಹಿಳೆ ಮೃತ್ಯು
ಸುಳ್ಯ: ಮಹಿಳೆಯೋರ್ವರು ತನ್ನ ಮಗುವಿನೊಂದಿಗೆ ಬಾವಿಗೆ ಹಾರಿದ್ದಾರೆ ಎನ್ನಲಾಗಿದ್ದು, ಘಟನೆಯಲ್ಲಿ ಮಹಿಳೆ ಮೃತಪಟ್ಟು, ಬಾಲಕಿ ಗಾಯಗೊಂಡಿರುವ ಬಗ್ಗೆ ದೇವಚಳ್ಳ ಗ್ರಾಮದ ತಳೂರು ಎಂಬಲ್ಲಿಂದ ವರದಿಯಾಗಿದೆ.
ಅಗ್ನಿಶಾಮಕ ದಳ ಸಿಬ್ಬಂದಿ ದಯಾನಂದ ಎಂಬವರ ಪತ್ನಿ ಕ್ಲರ್ಕ್ ಆಗಿರುವ ಗೀತಾ ತನ್ನ 4 ವರ್ಷದ ಮಗಳು ಪೂರ್ವಿಕಾಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ ಎಂದು ತಿಳಿದುಬಂದಿದೆ.
ಇಂದು ಮುಂಜಾನೆ ಮನೆಯವರು ಎದ್ದಾಗ ದಯಾನಂದ ಅವರ ಪತ್ನಿ ಮನೆಯಲ್ಲಿ ಇಲ್ಲದಿರುವುದನ್ನು ಅರಿತು ಹುಡುಕಾಡಿದಾಗ ಬಾವಿಯಲ್ಲಿ ಮಗಳು ಮತ್ತು ಪತ್ನಿ ಬಿದ್ದಿರುವುದು ಕಂಡುಬಂತು. ಮಗಳು ಬಾವಿಯೊಳಗೆ ಕಲ್ಲಿನ ಸಹಾಯದಿಂದ ಬದುಕುಳಿದಿದ್ದು, ಸುಳ್ಯ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆತಂದಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.
ಈ ಬಗ್ಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story