ಬಾವಿಗೆ ಬಿದ್ದು ಮಹಿಳೆ ಮೃತ್ಯು
ಶಿರ್ವ : ನೀರು ಸೇದುತ್ತಿದ್ದ ವೇಳೆ ಕಂಬ, ಹಗ್ಗ ಸಮೇತ ಬಾವಿಗೆ ಬಿದ್ದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಜೂ.28ರಂದು ರಾತ್ರಿ ವೇಳೆ ನಡೆದಿದೆ.
ಮೃತರನ್ನು ಸುಂದರ ಆಚಾರ್ಯ ಎಂಬವರ ಪತ್ನಿ ಸರೋಜಿನಿ ಆಚಾರ್ಯ (54) ಎಂದು ಗುರುತಿಸಲಾಗಿದೆ. ಇವರು ಮನೆಯ ಅಂಗಳದಲ್ಲಿರುವ ಬಾವಿ ಯಿಂದ ನೀರು ತರಲು ಹೋಗಿದ್ದು, ಈ ವೇಳೆ ಅವರು ಅಕಸ್ಮಿಕವಾಗಿ ಕಂಬ ಹಗ್ಗ ಸಹಿತ ನೀರಿಗೆ ಬಿದ್ದರೆನ್ನಲಾಗಿದೆ. ತೀವ್ರವಾಗಿ ಅಸ್ವಸ್ಥಗೊಂಡಿದ್ದು ಇವರು ಉಡುಪಿ ಜಿಲ್ಲಾಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರೆಂದು ತಿಳಿದು ಬಂದಿದೆ.
ಈ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story