ಭಾರೀ ಮಳೆ: ಬೆಳ್ತಂಗಡಿ ತಾಲೂಕಿನಾದ್ಯಂತ ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು(ಜು.4) ರಜೆ ಘೋಷಣೆ
ಸಾಂದರ್ಭಿಕ ಚಿತ್ರ
ಬೆಳ್ತಂಗಡಿ: ತಾಲೂಕಿನಾದ್ಯಂತ ರವಿವಾರ ರಾತ್ರಿಯಿಂದ ಭಾರೀ ಮಳೆ ಸುರಿಯುತ್ತಿದ್ದು ಇಲ್ಲಿನ ಸ್ಥಿತಿಗತಿಗಳನ್ನು ಗಮನಿಸಿ ಕ್ಷೇತ್ರ ಶಿಕ್ಷಣಾಧಿಕಾರಿಯವರಿಂದ ಮಾಹಿತಿಯನ್ನು ಪಡೆದುಕೊಂಡು ಜಿಲ್ಲಾಧಿಕಾರಿಯವರು ತಾಲೂಕಿನ ಎಲ್ಲ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಸೋಮವಾರ ರಜೆ ಘೋಷಣೆ ಮಾಡಿದ್ದಾರೆ.
ಗ್ರಾಮೀಣ ಪ್ರದೇಶದ ಮಕ್ಕಳಿಗೆ ಶಾಲೆಗಳಿಗೆ ಬರಲು ಸಮಸ್ಯೆಯಾಗುವ ಹಿನ್ನಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ತಾಲೂಕಿನಲ್ಲಿ ಭಾರೀ ಮಳೆ ಸುರಿಯುತ್ತಿದ್ದು ನದಿ ಹಳ್ಳಗಳುತುಂಬಿ ಹರಿಯುತ್ತಿದೆ.
Next Story