ಪಡುಬಿದ್ರೆ: ಮಗುಚಿ ಬಿದ್ದ ಲಾರಿ; ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತ್ಯು
ಪಡುಬಿದ್ರೆ: ಲಾರಿಯೊಂದು ದ್ವಿಚಕ್ರ ವಾಹನ ಸವಾರನ ಮೇಲೆ ಮಗುಚಿ ಬಿದ್ದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಪಡುಬಿದ್ರೆ ಜಂಕ್ಷನ್ ನಲ್ಲಿ ಇದೀಗ ನಡೆದಿದೆ.
ಮೃತ ದ್ವಿಚಕ್ರ ವಾಹನ ಸವಾರನನ್ನು ಸಂಶುದ್ದೀನ್ ಎಂದು ಗುರುತಿಸಲಾಗಿದೆ.
ಉಡುಪಿ ಕಡೆಯಿಂದ ಮಂಗಳೂರು ಕಡೆ ತೆರಳುತ್ತಿದ್ದ ಲಾರಿ ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನದ ಮೇಲೆ ಬಿದ್ದ ಪರಿಣಾಮ ಸವಾರ ಸಂಶುದ್ದೀನ್ ಅವರು ಸ್ಥಳದಲ್ಲೇ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.