ಪುತ್ತೂರು; ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಬೆಂಕಿ
ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ
ಪುತ್ತೂರು: ಚಲಿಸುತ್ತಿದ್ದ ಬಸ್ಸಿನ ಇಂಜಿನ್ ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಪುತ್ತೂರು ನಗರದ ಬೊಳುವಾರು ಇನ್ ಲ್ಯಾಂಡ್ ಮಯೂರದ ಸಮೀಪ ಬುಧವಾರ ನಡೆದಿದೆ. ಬಸ್ಸು ಚಾಲಕನ ಸಮಯ ಪ್ರಜ್ಞೆಯಿಂದಾಗಿ ಸಂಭಾವ್ಯ ಅನಾಹುತ ತಪ್ಪಿದೆ.
ಕೊಡಗಿನ ಸೋಮವಾರ ಪೇಟೆಯಿಂದ ಪುತ್ತೂರಿಗೆ ಬಂದು ಧರ್ಮಸ್ಥಳ ಕಡೆಗೆ ತೆರಳುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ನಲ್ಲಿ ಆಕಸ್ಮಿಕವಾಗಿ ಬೆಂಕಿ ಮತ್ತು ಹೊಗೆ ಕಾಣಿಸಿಕೊಂಡಿದ್ದು, ಬಸ್ ಚಾಲಕ ತತ್ ಕ್ಷಣ ಬಸ್ ಅನ್ನು ನಿಲ್ಲಿಸಿದ್ದಾರೆ. ಬಳಿಕ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಯಿತು. ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದರು.
ಚಾಲಕ ಸರಿಯಾದ ಸಮಯಕ್ಕೆ ಬಸ್ ನಿಲ್ಲಿಸಿ ಪರಿಶೀಲನೆ ನಡೆಸಿದ ಕಾರಣ ಭಾರೀ ಅನಾಹುತ ತಪ್ಪಿದೆ.
Next Story