ತೋಡಾರು: ರಸ್ತೆಗೆ ಬಿದ್ದ ಆಲದಮರ; ಸಂಚಾರಕ್ಕೆ ತಾತ್ಕಾಲಿಕ ವ್ಯವಸ್ಥೆ
ತೋಡಾರು: ಜಂಕ್ಷನ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಆಲದಮರವೊಂದು ಬುಡಸಮೇತ ರಸ್ತೆಗೆ ಬಿದ್ದಿದೆ.
ಇದರಿಂದ ವಾಹನ ಸಂಚಾರ ವ್ಯತ್ಯಯವಾಗಿದ್ದು, ಬದಲಿ ರಸ್ತೆಯಲ್ಲಿ ತೆರಳುವ ವೇಳೆ ಐರಾವತ ಬಸ್ಸೊಂದು ರಸ್ತೆಯ ಮಧ್ಯೆ ಸಿಲುಕಿಕೊಂಡಿತ್ತು.
ಆಲದಮರದ ಬುಡದಲ್ಲಿಯೇ ತೋಡಾರಿನ ಅಬೂಬಕ್ಕರ್ ಎಂಬವರು ಹಣ್ಣಿನ ವ್ಯಾಪಾರ ನಡೆಸುತ್ತಿದ್ದರು. ಘಟನೆಯಲ್ಲಿ ಅವರ ಅಂಗಡಿ ಜಖಂಗೊಂಡಿದೆ.
ಸ್ಥಳೀಯರಿಂದ ಮರದ ಗೆಲ್ಲುಗಳ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಸುಗಮ ವಾಹನ ಸಂಚಾರಕ್ಕಾಗಿ ತಾತ್ಕಾಲಿಕ ವ್ಯವಸ್ಥೆ ಮಾಡಲಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.