Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬಿಲ್ಲವ ಸಮುದಾಯದ ನಿರ್ಲಕ್ಷ್ಯ| ಸಚಿವ...

ಬಿಲ್ಲವ ಸಮುದಾಯದ ನಿರ್ಲಕ್ಷ್ಯ| ಸಚಿವ ಕೋಟ, ಸುನೀಲ್ ರಿಂದ ಹೋರಾಟ ಹತ್ತಿಕ್ಕುವ ಯತ್ನ: ಪ್ರಣಾವನಂದ ಸ್ವಾಮೀಜಿ

"ನಿರ್ಲಜ್ಜ ರಾಜಕಾರಣಿಗಳಿಗೆ ನಮ್ಮ ಸಮುದಾಯದ ಶಕ್ತಿಯನ್ನು ಮುಂದಿನ ದಿನಗಳಲ್ಲಿ ತೋರಿಸಲಿದ್ದೇವೆ"

ವಾರ್ತಾಭಾರತಿವಾರ್ತಾಭಾರತಿ9 July 2022 2:20 PM IST
share
ಬಿಲ್ಲವ ಸಮುದಾಯದ ನಿರ್ಲಕ್ಷ್ಯ| ಸಚಿವ ಕೋಟ, ಸುನೀಲ್ ರಿಂದ ಹೋರಾಟ ಹತ್ತಿಕ್ಕುವ ಯತ್ನ: ಪ್ರಣಾವನಂದ ಸ್ವಾಮೀಜಿ

ಮಂಗಳೂರು, ಜು.9: ನಾರಾಯಣ ಗುರು ನಿಗಮ ಹಾಗೂ ಪಠ್ಯ ಪುಸ್ತಕ ಪರಿಷ್ಕರಣೆ ಸಂದರ್ಭ ನಾರಾಯಣ ಗುರುಗಳ ಪಠ್ಯವನ್ನು ಕೈಬಿಟ್ಟ ವಿಚಾರ ಸೇರಿದಂತೆ ಹಲವಾರು ವಿಷಯಗಳ ಕುರಿತಂತೆ ಬಿಲ್ಲವ ಸಮುದಾಯವನ್ನು ರಾಜ್ಯ ಸರಕಾರ ನಿರ್ಲಕ್ಷಿಸುತ್ತಿದೆ. ಈ ಬಗ್ಗೆ ಸ್ಥಳೀಯ ಸಮುದಾಯದ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಸುನೀಲ್ ಕುಮಾರ್ ಅವರನ್ನು ಕೇಳಿದರೆ, 'ಮುಖ್ಯಮಂತ್ರಿ ನಮ್ಮ ಮಾತು ಕೇಳುತ್ತಿಲ್ಲ' ಎನ್ನುತ್ತಿದ್ದಾರೆ. ಹಾಗಿದ್ದರೆ ರಾಜೀನಾಮೆ ಕೊಟ್ಟು ಹೊರಬನ್ನಿ ಎಂದು ಅವರಿಗೆ ಹೇಳಿದ್ದೇನೆ. ಆದರೆ ಸ್ಪಂದನ ಸಿಗುತ್ತಿಲ್ಲ. ಬದಲಾಗಿ ಅವರು ನಮ್ಮ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನ ಮಾಡುತ್ತಿದ್ದಾರೆ. ಅವರಿಗೆ ಸಮುದಾಯದ ಜನಪ್ರತಿನಿಧಿಗಳಾಗಿ ಮುಂದುವರಿಯುವ ನೈತಿಕತೆ ಇಲ್ಲ ಎಂದು ಆರ್ಯ ಈಡಿಗ ರಾಷ್ಟ್ರೀಯ ಮಹಾ ಮಂಡಲದ ರಾಷ್ಟ್ರೀಯ ಅಧ್ಯಕ್ಷ, ಬ್ರಹ್ಮಶ್ರೀ ನಾರಾಯಣಗುರು ಶಕ್ತಿ ಪೀಠದ ಡಾ.ಪ್ರಣಾವನಂದ ಸ್ವಾಮೀಜಿ ಸ್ಥಳೀಯ ಜನಪ್ರತಿನಿಧಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 'ಕುಲಕಸುಬು ನಮ್ಮ ಹಕ್ಕು' ಎಂಬ ಘೋಷಣೆಯೊಂದಿಗೆ ಕಳೆದ ಎರಡು ವರ್ಷಗಳಿಂದ ಚಿಂಚೋಳಿಯಿಂದ ಪಾದಯಾತ್ರೆ ನಡೆಸಿದೆ. ಆ ಸಂದರ್ಭದಲ್ಲೂ ರಾಜ್ಯದಲ್ಲಿ ಆಡಳಿತ ನಡೆಸುವ ಸಮುದಾಯ ಜನಪ್ರತಿನಿಧಿಗಳಾಗಿರುವವರು ಯಾರೂ ಸಹಕಾರ ನೀಡಿಲ್ಲ. ಇತ್ತೀಚೆಗೆ ಆಮರಣಾಂತ ಉಪವಾಸ ಕೈಗೊಂಡಿದ್ದೆ. ಆ ಸಂದರ್ಭ ಕೆಲ ಉತ್ತರ ಭಾಗದ ಜನಪ್ರತಿನಿಧಿಗಳು ನನ್ನನ್ನು ಭೇಟಿಯಾಗಿ ಜುಲೈ 5ರೊಳಗೆ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದ್ದರು. ಆದರೆ ಈವರೆಗೆ ಅವರ ಒಂದು ಫೋನ್ ಕರೆಯೂ ಇಲ್ಲ. ಹಾಗಾಗಿ ಜುಲೈ 13ರಿಂದ ಉತ್ತರ ಕರ್ನಾಟಕದ 9 ಜನ ಜನಪ್ರತಿನಿಧಿಗಳ ಮನೆ ಎದುರು ಧರಣಿ ಕೂರಲಾಗುವುದು. ನಿರ್ಲಜ್ಜ ರಾಜಕಾರಣಿಗಳಿಗೆ ನಮ್ಮ ಸಮುದಾಯದ ಶಕ್ತಿಯನ್ನು ಮುಂದಿನ ದಿನಗಳಲ್ಲಿ ತೋರಿಸಲಿದ್ದೇವೆ ಎಂದು ಪ್ರಣಾವನಂದ ಸ್ವಾಮೀಜಿ ಎಚ್ಚರಿಕೆ ನೀಡಿದರು.

ಪ್ರತಿ ಮಾತು ಮಾತಿಗೂ ನಾರಾಯಣಗುರುಗಳ ನಾಲ್ಕು ಶಾಲೆ ಕಟ್ಟಿಸಿದ್ದೇವೆ ಎಂದು ಇಲ್ಲಿನ ಜನಪ್ರತಿನಿಧಿಗಳಾದ ಸುನೀಲ್ ಕುಮಾರ್ ಹಾಗೂ ಕೋಟ ಶ್ರೀನಿವಾಸ ಪೂಜಾರಿ ಭಾಷಣದಲ್ಲಿ ಹೇಳುತ್ತಿರುತ್ತಾರೆ. ಇದು ಮೂಗಿಗೆ ತುಪ್ಪ ಸವರುವ ಯತ್ನವಷ್ಟೆ. ಕೋಟ ಶ್ರೀನಿವಾಸ ಪೂಜಾರಿ ಮೇಲೆ ಸಾಕಷ್ಟು ಗೌರವ ಇದೆ. ಆದರೆ ಸಮುದಾಯದ ನೋವಿನ ಎದುರು ಅವರ ಸರಳ ಸಜ್ಜನಿಕೆ ಯಾವುದೇ ಉಪಯೋಗಕ್ಕೆ ಬಾರದು. ಹಾಗಾಗಿ ಮುಂದಿನ ದಿನಗಳಲ್ಲಿ ಯುವಕರಿಗೆ ರಾಜಕೀಯ ಪ್ರಬುದ್ಧತೆ ನೀಡುವ ಜಾಗೃತಿ ನೀಡುವಲ್ಲಿ ನಾವು ಕಾರ್ಯಾಚರಣೆ ಮಾಡಲಿದ್ದೇವೆ ಎಂದು ಅವರು ಹೇಳಿದರು.

ಪ್ರತಿಯೊಂದು ಸಮುದಾಯಕ್ಕೂ ನೋವು ಆದಾಗ ಅವರ ಸಮುದಾಯದ ನಾಯಕರು, ಜನಪ್ರತಿನಿಧಿಗಳು ಧ್ವನಿ ಎತ್ತಿ ಸರಕಾರದಿಂದ ಆಗಬೇಕಾದ್ದನ್ನು ಮಾಡಿಸಿಕೊಳ್ಳುತ್ತಿದ್ದಾರೆ. ಆದರೆ ನಮ್ಮ ಸಮುದಾಯದ ಜನಪ್ರತಿನಿಧಿಗಳು ಮಾತ್ರ ಬಾಯಿ ಮುಚ್ಚಿ ಕುಳಿತಿದ್ದಾರೆ. ರಾಜ್ಯದಲ್ಲಿ 70 ಲಕ್ಷ ಜನಸಂಖ್ಯೆಯನ್ನು ಹೊಂದಿರುವ ರಾಜ್ಯದ ಒಟ್ಟು ಜನಸಂಖ್ಯೆಯ ಶೇ. 20ರಷ್ಟಿರುವ ಬಿಲ್ಲವ ಸಮುದಾಯ ಕರಾವಳಿ ಭಾಗದಲ್ಲಿ ಚುನಾವಣೆಯಲ್ಲೂ ನಿರ್ಣಾಯಕ ಸ್ಥಾನದಲ್ಲಿದ್ದಾರೆ. ಹಾಗಿರುವಾಗ ಮುಂದಿನ ದಿನಗಳಲ್ಲಿ ನಾವು ನಮ್ಮ ಶಕ್ತಿಯನ್ನು ಪ್ರದರ್ಶಿಸಲಿದ್ದೇವೆ ಎಂದರು.

ಪ್ರಸಕ್ತ ಜನಪ್ರತಿನಿಧಿಗಳ ಮನೆ ಎದುರಿನ ಧರಣಿ ಕಾರ್ಯಕ್ರಮ ಉತ್ತರ ಕರ್ನಾಟಕಕ್ಕೆ ಮಾತ್ರ ಸೀಮಿತವಾಗಿರುವುದೇಕೆ? ಇಲ್ಲಿನ ಜನಪ್ರತಿನಿಧಿಗಳ ಬಗ್ಗೆ ಮೃದು ಧೋರಣೆಯೇ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸ್ವಾಮಿ ಪ್ರಣಾವನಂದ, ಕಳೆದ ಹಲವು ವರ್ಷಗಳಿಂದ ನಾವು ಹೋರಾಟ ನಡೆಸುತ್ತಿರುವುದು ಪ್ರಮುಖವಾಗಿ ಉತ್ತರ ಕರ್ನಾಟಕ ಭಾಗದಲ್ಲಿ. ಹಾಗಾಗಿ ಇದು ಆ ಭಾಗದಲ್ಲಿ ಬೂಸ್ಟರ್ ಡೋಸ್ ಭಾಗವಾಗಿ ಈ ಹೋರಾಟ. ಇಲ್ಲಿ ಟೆಸ್ಟ್ ಡೋಸ್ ಆರಂಭಿಸಿದ್ದೇವೆ. ಮುಂದೆ ಬೂಸ್ಟರ್ ಡೋಸ್ ಇದೆ ಎಂದರು.

►ನಳಿನ್ ಕುಮಾರ್ ಕಟೀಲ್‌ ಜಾತಿಯವಾದಿ: ಸತ್ಯಜಿತ್ ಸುರತ್ಕಲ್

ನಾರಾಯಣಗುರು ವಿಚಾರ ವೇದಿಕೆಯ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್ ಮಾತನಾಡಿ, ರಾಷ್ಟ್ರೀಯ ಪಕ್ಷದ ರಾಜ್ಯಾಧ್ಯಕ್ಷರಾಗಿರುವ ನಳಿನ್ ಕುಮಾರ್ ಕಟೀಲ್‌ರವರು ಪಠ್ಯ ಪುಸ್ತಕ ಪರಿಷ್ಕರಣೆ ಸಂದರ್ಭ ವಿವಿಧ ಸಮುದಾಯಗಳಿಗೆ ಆದ ನೋವಿನ ಬಗ್ಗೆ ಮೌನವಾಗಿದ್ದರು. ಸಿಎಂ ಜತೆ ಚರ್ಚಿಸಿ ನ್ಯಾಯ ಕೊಡಿಸುವ ಕೆಲಸ ಮಾಡಿಲ್ಲ. ಆದರೆ ಕಯ್ಯಾರ ಕಿಂಞಣ್ಣ ರೈ ಅವರ ವಿಷಯ ಪ್ರಸ್ತಾಪ ಆದಾಗ ಸಮುದಾಯದ ನಾಯಕರು ಧ್ವನಿ ಎತ್ತಿದಾಗ ಅವರ ಸಮುದಾಯದ ಮನೆಗೆ ತೆರಳಿ ಸಂತೈಸುವ ಕೆಲಸ ಮಾಡಿದ್ದಾರೆ. ಅವರು ಹಿಂದೂವಾದಿಯೋ, ಜಾತಿಯವಾದಿಯೋ ಎಂಬುದು ಇದರಲ್ಲೇ ಸಾಬೀತಾಗಿದೆ. ಅವರಿಗಿಂತ ಇನ್ನೋರ್ವ ಜಾತಿವಾದಿಯೇ ಇಲ್ಲ ಎಂದು  ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಿಂದುತ್ವದ ಹೋರಾಟ ಕೇವಲ ಹಿಂದುಳಿದ ವರ್ಗ ಅಥವಾ ದಲಿತ ವರ್ಗಕ್ಕತೆ ಮಾತ್ರ ಸೀಮಿತವಾಗಿಲ್ಲ. ಆದರೆ ರಾಜಕಾರಣ ಹಿಂದುಳಿದ ವರ್ಗವನ್ನು ಹಿಂದುತ್ವಕ್ಕಾಗಿ ಬಳಸಿಕೊಂಡಿದೆ. ಅವರಿಗೆ ನ್ಯಾಯ ಒದಗಿಸುವ ಕೆಲಸ ಮಾಡಿಲ್ಲ. ಉಳಿದ ವರ್ಗಗಳು ಸಾಮಾಜಿಕ, ರಾಜಕೀಯ ನ್ಯಾಯ ಪಡೆಯುವಲ್ಲಿ ಸಫಲರಾಗಿದ್ದಾರೆ. ಹಾಗಾಗಿ ಹಿಂದುಳಿದ ವರ್ಗ, ದಲಿತ ವರ್ಗವನ್ನು ತುಳಿಯಲು ಹೊರಟರೆ ಹಿಂದೂ ಸಮಾಜ ಸಾಯಲಿದೆ ಎಂದು ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್., ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಉಪಾಧ್ಯಕ್ಷ ಹಾಗೂ ಗೆಜ್ಜೆಗಿರಿ ಕ್ಷೇತ್ರದ ಅಧ್ಯಕ್ಷ ಪೀತಾಂಬರ ಹೆರಾಜೆ, ಗೆಜ್ಜೆಗಿರಿ ಕ್ಷೇತ್ರದ ವಕ್ತಾರ ರಾಜೇಂದ್ರ ಚಿಲಿಂಬಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X